ಡಿ.24ರಂದು ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣೆ, ಕಾಲೇಜು ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಪ್ರಾಚಾರ್ಯರು, ಉಪನ್ಯಾಸಕರಿಗೆ ಸನ್ಮಾನ, ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಸಂಜೆ 4.30ಕ್ಕೆ ಸಮಾರೋಪ ನಡೆಯಲಿದೆ. ಸಂಜೆ 7ಕ್ಕೆ ಗಾಯಕ ರಾಜೇಶ್ ಕೃಷ್ಣನ್ ತಂಡದಿಂದ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಹೇಳಿದರು. ಸುವರ್ಣ ಸಂಭ್ರಮಕ್ಕಾಗಿ ಶಾಸಕರು 50 ಲಕ್ಷ ರೂ. ಅನುದಾನ ನೀಡಿದ್ದಾರೆ. 2,500 ವಿದ್ಯಾರ್ಥಿಗಳನ್ನು ಹೊಂದಿರುವ ಕಾಲೇಜು ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ತಿಳಿಸಿದರು.