ಶಿವಮೊಗ್ಗ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಯುವಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.10 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1) ತೀರ್ಪು ನೀಡಿದೆ.
ತಾಲೂಕಿನ ನಿವಾಸಿ 22 ವರ್ಷದ ಯುವಕ ಜೈಲು ಶಿಕ್ಷೆಗೆ ಗುರಿಯಾದವ. ಆತ 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಅಂದಿನ ಇನ್‌ಸ್ಪೆಕ್ಟರ್ ಬಿ.ಮಂಜುನಾಥ್ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ತನಿಖೆ ನಡೆಸಿದ ನ್ಯಾಯಾಧೀಶ ನಿಂಗನಗೌಡ ಭ ಪಾಟೀಲ್ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ, ದಂಡ ಹಾಗೂ ನೊಂದ ಬಾಲಕಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಶ್ರೀಧರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.