ಕೆಪಿಎಸ್‌ಗಳ ಮೂಲಕ ಗುಣಮಟ್ಟದ ಶಿಕ್ಷಣ | Education

ತೀರ್ಥಹಳ್ಳಿಯಲ್ಲಿ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳಿಗೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಮಂಜುನಾಥ ಗೌಡ ಅಧಿಕಾರ ಹಸ್ತಾಂತರಿಸಿದರು. ಪೂರ್ಣೇಶ್, ಕಿಮ್ಮನೆ ರತ್ನಾಕರ್, ಆರ್.ಎಂ.ಮಂಜುನಾಥ ಗೌಡ, ಚೇತನ್ ಗೌಡ ಇತರರಿದ್ದರು.
ತೀರ್ಥಹಳ್ಳಿಯಲ್ಲಿ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳಿಗೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಮಂಜುನಾಥ ಗೌಡ ಅಧಿಕಾರ ಹಸ್ತಾಂತರಿಸಿದರು. ಪೂರ್ಣೇಶ್, ಕಿಮ್ಮನೆ ರತ್ನಾಕರ್, ಆರ್.ಎಂ.ಮಂಜುನಾಥ ಗೌಡ, ಚೇತನ್ ಗೌಡ ಇತರರಿದ್ದರು.
Published on
ತೀರ್ಥಹಳ್ಳಿ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡವರ ಮನೆಗಳಿಗೆ ಬೆಳಕಾಗಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಪಟ್ಟಣದದಲ್ಲಿ ಆಯೋಜಿಸಿದ್ದ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿದ ಅವರು,  ಜಾತಿ, ಧರ್ಮದ ಭಾವನೆ ಹೋಗಲಾಡಿಸಿ ಎಲ್ಲರೂ ಏಕತೆಯಿಂದ ಒಂದಾಗಿ ಬಾಳುವಂತಾಗಲು ಸರ್ಕಾರಿ ಶಾಲೆಗಳ ಅಭಿವೃದ್ಧಿ ಅಗತ್ಯ ಎಂದರು.
ಕಾಂಗ್ರೆಸ್ ಸರ್ಕಾರ ಬಡವರಿಗಾಗಿ 1.15 ಸಾವಿರ ಕೋಟಿ ರೂ. ವೆಚ್ಚ ಮಾಡುವ ಮೂಲಕ ಬಡ ಜನರ ಬದುಕಿಗೆ ಭರವಸೆಯ ಬೆಳಕು ನೀಡಿದೆ. ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಹೆಚ್ಚಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ಆರು ತಿಂಗಳಲ್ಲಿ 18 ಸಾವಿರ ಶಿಕ್ಷಕರ ನೇಮಕಕ್ಕೆ ಸಿದ್ಧತೆ ನಡೆದಿದೆ. ಎಸ್‌ಎಸ್‌ಎಲ್‌ಸಿಯಲ್ಲಿ ಕೆಲವು ಜಿಲ್ಲೆಗಳ ಲಿತಾಂಶ ನಿರೀಕ್ಷೆಗಿಂತ ಕಡಿಮೆಯಾದರೆ ಶಿಕ್ಷಕರನ್ನೇ ಹೊಣೆ ಮಾಡಲಾಗುವುದು ಎಂದು ಎಚ್ಚರಿಸಿದರು.
ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್.ಎಸ್.ಮಂಜುನಾಥ ಗೌಡ ಮಾತನಾಡಿ, ಕಾಂಗ್ರೆಸ್ ಈ ದೇಶಕ್ಕೆ ಅನಿವಾರ್ಯ. ಜಾತಿ, ಧರ್ಮಗಳ ಮೂಲಕ ಒಡೆದಾಳುವ ನೀತಿಯ ಬಿಜೆಪಿ ಎಂದೂ ತನ್ನ ಸ್ವಂತ ಶಕ್ತಿ ಮೇಲೆ ಗೆಲುವು ಸಾಧಿಸುತ್ತಿಲ್ಲ. ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವೈಲ್ಯವನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು ಎಂದು ತಿಳಿಸಿದರು.
ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೂತನ ಅಧ್ಯಕ್ಷ ಪೂರ್ಣೇಶ್‌ಗೆ ಅಧಿಕಾರ ಹಸ್ತಾಂತರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಮಾಜಿ ಶಾಸಕ ಕಿಮ್ಮನೆ ರತ್ನಾಕರ್, ಎಂಎಡಿಬಿ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ, ಎಂಎಲ್‌ಸಿ ಬಲ್ಕಿಷ್ ಬಾನು, ಜವಳಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಪ್ರಮುಖರಾದ ಮಂಜುನಾಥ್, ರಾಘವೇಂದ್ರ, ಗೀತಾ ರಮೇಶ್, ಅಮರನಾಥ ಶೆಟ್ಟಿ, ಪುಟ್ಟೋಡ್ಲು ರಾಘವೇಂದ್ರ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net