ಜೂನ್ ಅಂತ್ಯದೊಳಗೆ 18 ಸಾವಿರ ಶಿಕ್ಷಕರ ನೇಮಕಾತಿ | Education Department

ಶಿವಮೊಗ್ಗದ ಎನ್‌ಇಎಸ್‌ನ ಕಾನೂನು ಮಹಾವಿದ್ಯಾಲಯದಲ್ಲಿ ಬೆಂಗಳೂರು ವಿಭಾಗದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ಸಿ ಫಲಿತಾಂಶ ಸುಧಾರಣಾ ಕಾರ್ಯಾಗಾರವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಉದ್ಘಾಟಿಸಿದರು. ಬಲ್ಕಿಷ್ ಬಾನು, ವಿ.ರಶ್ಮಿ ಮಹೇಶ್, ಎನ್.ಹೇಮಂತ್, ವಿಕಾಸ್ ಕಿಶೋರ್ ಸುರಳ್ಕರ್, ವಿ.ಅಭಿಷೇಕ್, ಎಸ್.ಆರ್.ಮಂಜುನಾಥ, ಎಚ್.ಆರ್.ಕೃಷ್ಣಮೂರ್ತಿ, ರಮೇಶ್ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಸರ್ಕಾರಿ, ಅನುದಾನಿತ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸಲು ಕ್ರಮ
  • ಬೆಂಗಳೂರು ವಿಭಾಗದ ಎಸ್‌ಎಸ್‌ಎಲ್ಸಿ ಫಲಿತಾಂಶ ಸುಧಾರಣಾ ಕಾರ್ಯಾಗಾರ
  • ಶಿವಮೊಗ್ಗದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ
ಶಿವಮೊಗ್ಗ: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ ಶಿಕ್ಷಕ(Teachers)ರ ಕೊರತೆ ನೀಗಿಸಲು 2026ರ ಜೂನ್(June)ಅಂತ್ಯದೊಳಗೆ ಅನುದಾನಿತ ಮತ್ತು ಸರ್ಕಾರಿ ಶಾಲೆಗಳಿಗೆ 18 ಸಾವಿರ ಶಿಕ್ಷಕರ ನೇಮಕ ಮಾಡಲಾಗುವುದು ಎಂದು ಶಿಕ್ಷಣ ಸಚಿವ(Education minister)ಮಧು ಬಂಗಾರಪ್ಪ ಹೇಳಿದರು.
ನಗರದ ಎನ್‌ಇಎಸ್‌ನ ಕಾನೂನು ಮಹಾವಿದ್ಯಾಲಯದಲ್ಲಿ ಶನಿವಾರ ಬೆಂಗಳೂರು ವಿಭಾಗ(ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ)ದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್ಸಿ(Sslc)ಫಲಿತಾಂಶ ಸುಧಾರಣಾ ಕಾರ್ಯಾಗಾರ(Workshop)ಉದ್ಘಾಟಿಸಿ ಮಾತನಾಡಿದರು.
ಕಲಿಕೆಗೆ ಸೂಕ್ತ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್(Free power)ಸಂಪರ್ಕ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಲಾಗುತ್ತಿದೆ. ಇದು ವಿಶೇಷ ಕಲಿಕಾ ತರಗತಿಗಳನ್ನು ನಡೆಸಲು ಸಹಕಾರಿಯಾಗಲಿದೆ. ಮುಂದಿನ ಶೈಕ್ಷಣಿಕ ಸಾಲಿನ ಆರಂಭದಿಂದಲೇ ಅನುಕೂಲವಾಗುವಂತೆ ಶಿಕ್ಷಕರ ನೇಮಿಸಿಕೊಳ್ಳುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಆರಂಭಿಸಲು ಉದ್ದೇಶಿಸಿದ್ದ 500 ಕೆಪಿಎಸ್‌ಗಳ ಸಂಖ್ಯೆಯನ್ನು 900ಕ್ಕೆ ಹೆಚ್ಚಿಸಿ ಸರ್ಕಾರ ನಿರ್ಣಯ ಕೈಗೊಂಡಿದ್ದು, ಶಿಕ್ಷಣ ಕ್ಷೇತ್ರದ ವಿಕಾಸಕ್ಕೆ ಸಹಕಾರಿಯಾಗಲಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net