ಭಾನುವಾರ ಬೆಳಗ್ಗೆ ವಾಯುವಿಹಾರಕ್ಕೆ ಬಂದಾಗ ಮರವೊಂದು ಮುರಿದು ಬೀಳುವ ಸ್ಥಿತಿಯಲ್ಲಿರುವುದನ್ನು ಗಮನಿಸಿ ನಿಸರ್ಗ ವಾಯು ವಿಹಾರಿಗಳ ಸಂಘದವರು ಶಾಸಕರ ಗಮನಕ್ಕೆ ತಂದರು. ಶಾಸಕರ ಸೂಚನೆ ಹಿನ್ನೆಲೆಯಲ್ಲಿ ನಗರಸಭೆ, ಮೆಸ್ಕಾಂ, ಅರಣ್ಯ ಇಲಾಖೆ ಸಿಬ್ಬಂದಿ ಜನರ ಮನವಿಗೆ ಸ್ಪಂದಿಸಿದ್ದಾರೆ. ವಿಪರೀತ ಗಾಳಿ, ಮಳೆಯಿಂದ ನಗರಸಭೆ ಎದುರಿನ ಕೆಳಭಾಗದ ರಸ್ತೆಯಲ್ಲಿ ಮರದ ಕೊಂಬೆಗಳು ಮುರಿದು ಬಿದ್ದು ವಾಹನ, ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗಿತ್ತು. ತಕ್ಷಣ ನಗರಸಭೆಯಿಂದ ತೆರವುಗೊಳಿಸಲಾಯಿತು.