ಇಟ್ಟಿಗೆಹಳ್ಳಿ ಗ್ರಾಮದ ರಸ್ತೆ ಕೆಸರುಮಯ | student face inconvenience

ಇಟ್ಟಿಗೆಹಳ್ಳಿ ಗ್ರಾಮದಲ್ಲಿ ಕೆಸರು ಮಯವಾಗಿರುವ ಸರ್ಕಾರಿ ಶಾಲೆ ಸಂಪರ್ಕ ರಸ್ತೆ.
ಇಟ್ಟಿಗೆಹಳ್ಳಿ ಗ್ರಾಮದಲ್ಲಿ ಕೆಸರು ಮಯವಾಗಿರುವ ಸರ್ಕಾರಿ ಶಾಲೆ ಸಂಪರ್ಕ ರಸ್ತೆ.
Published on
ಹೊಳೆಹೊನ್ನೂರು: ಭದ್ರಾವತಿ ತಾಲೂಕಿನ ಇಟ್ಟಿಗೆಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಕೆಸರು ಮಯವಾಗಿದೆ. ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಕೆಸರುಮಯ ರಸ್ತೆಯಲ್ಲಿ ಸಾಗುವುದಕ್ಕೆ ಮಕ್ಕಳು ಹರಸಾಹಸ ಮಾಡಬೇಕು. ಸ್ವಲ್ಪ ಮಳೆ ಬಂದರೂ ಸಾಕು ರಸ್ತೆಯಲ್ಲಿ ಓಡಾಡಲು ಸಾಧ್ಯವಿಲ್ಲ. ಕೆಸರಿನ ಗುಂಡಿ ರಸ್ತೆಯಲ್ಲಿ ಬೈಕ್ ಸವಾರನೋರ್ವ ಬಿದ್ದು ಗಾಯಗೊಂಡಿದ್ದಾನೆ. ರಸ್ತೆ ದುರಸ್ತಿಗೊಳಿಸುವಂತೆ ಗ್ರಾಮಸ್ಥರು ಸಂಬಂದಪಟ್ಟ ಅಧಿಕಾರಿಗಳಿಗೆ ಹತ್ತಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಶಾಲೆಯ ರಸ್ತೆಯಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡವಿದೆ. ಕೆಸರು ರಸ್ತೆಯಲ್ಲಿ ನಿವಾಸಿಗಳು ಡೇರಿಗೆ ಹಾಲು ಹಾಕುವುದಕ್ಕೆ ಹೋಗುವುದಕ್ಕೂ ಅಡಚಣೆಯಾಗಿದೆ. ಅಧಿಕಾರಿಗಳು ಕೂಡಲೇ ರಸ್ತೆ ದುರಸ್ತಿಗೊಳಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net