ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ಹೊಸ ಮಾರ್ಗ(96 ಕಿ.ಮೀ.) ಮತ್ತು ಶಿವಮೊಗ್ಗ-ಹರಿಹರ ಹೊಸ ಮಾರ್ಗ(79 ಕಿಮೀ) ಯೋಜನೆಗಳು ಜಾರಿಗೊಳ್ಳುವ ನಿಟ್ಟಿನಲ್ಲಿ ಪದೇಪದೆ ಕೇಂದ್ರಕ್ಕೆ ಪತ್ರ ಬರೆದು, ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಲಾಗಿತ್ತು. 50:50 ವೆಚ್ಚ ಹಂಚಿಕೆ ಆಧಾರದ ಮೇಲೆ ಮಂಜೂರಾದ ಶಿವಮೊಗ್ಗ-ರಾಣೆಬೆನ್ನೂರು ಯೋಜನೆ ಸದ್ಯಕ್ಕೆ ಸ್ಥಗಿತಗೊಂಡಿದೆ ಎಂದು ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಯೋಜನೆಗೆ ಅಗತ್ಯವಿರುವ 559 ಹೆಕ್ಟೇರ್‌ನಲ್ಲಿ 226 ಹೆಕ್ಟೇರ್ ಮಾತ್ರ ಸ್ವಾಧೀನ ಪಡಿಸಿಕೊಂಡಿದ್ದು, ಇನ್ನೂ 333 ಹೆಕ್ಟೇರ್ ಸ್ವಾಧೀನ ಬಾಕಿ ಇದೆ. ಒಟ್ಟು 488 ಹೆಕ್ಟೇರ್ ಭೂಮಿ ಅಗತ್ಯವಿದ್ದ ಶಿವಮೊಗ್ಗ-ಹರಿಹರ ಯೋಜನೆಯನ್ನು ಸಂಪೂರ್ಣ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ವೆಚ್ಚ ಹಂಚಿಕೆ ಹಾಗೂ ಉಚಿತ ಭೂಮಿ ನೀಡದಿದ್ದುದು ಕಾರಣ ಎಂದಿದ್ದಾರೆ.