ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಡಿನಲ್ಲಿ ಮೂವರ ಎನ್‌ಕೌಂಟರ್(Encounter) ಘಟನೆ ಕುರಿತು ರಾಜ್ಯ ಸರ್ಕಾರ ಸೂಕ್ತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಯಾರಾದರೂ ಬಂದೂಕು ಹಿಡಿದು ಬೇಟೆಗೆ ತೆರಳಿದ್ದಾರೆಂಬ ಕಾರಣಕ್ಕೆ ಅವರ ಮೇಲೆ ನೇರವಾಗಿ ಎನ್‌ಕೌಂಟರ್ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜೀವ ಕಳೆದುಕೊಂಡವರ ಕುಟುಂಬಗಳಿಗೆ ರಾಜ್ಯ ಸರ್ಕಾರ ತಕ್ಷಣ ಸೂಕ್ತ ಹಾಗೂ ನ್ಯಾಯಯುತ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು.