ಟ್ರೈನಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಅವರ ಹಳೆಯ ವಾಟ್ಸ್‌ಆ್ಯಪ್ ಸಂದೇಶಗಳು ಇದೀಗ ವೈರಲ್ ಆಗಿವೆ. ಈ ಸಂದೇಶಗಳಲ್ಲಿ ಲಯನ್ಸ್ ಸಫಾರಿ ವಿಭಾಗದಲ್ಲಿ ಭದ್ರತಾ ಹಾಗೂ ಪ್ರಾಣಿಗಳ ಆರೈಕೆ ವ್ಯವಸ್ಥೆಯಲ್ಲಿ ಕೆಲವು ಕೊರತೆಗಳಿವೆ ಎಂದು ಉಲ್ಲೇಖಿಸಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಕಾರ್ಯನಿರ್ವಾಹಕ ನಿರ್ದೇಶಕ ಅಮರಾಕ್ಷರ್, ವಾಟ್ಸ್‌ಆ್ಯಪ್ ಸಂದೇಶಗಳು ಬಂದ ನಂತರವೇ ಹುಲಿ ಮತ್ತು ಸಿಂಹಧಾಮದಲ್ಲಿ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದೇವೆ. ವೈರಲ್ ಆಗಿರುವ ಚಾಟ್‌ಗಳಲ್ಲಿ ಹೇಳಿರುವ ವಿಷಯಗಳಲ್ಲಿ ಕೆಲವೊಂದು ಸತ್ಯವಾಗಿದ್ದರೂ ಅವುಗಳನ್ನು ಗಮನದಲ್ಲಿಟ್ಟು ತಕ್ಷಣ ಕ್ರಮ ಕೈಗೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ತನಿಖಾ ತಂಡಕ್ಕೆ ಸಲ್ಲಿಸಿದ್ದು, ಸರ್ಕಾರದ ನಿರ್ಧಾರಕ್ಕೆ ಅನುಗುಣವಾಗಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.