ಶತಮಾನೋತ್ಸವ ಸಮಿತಿ ಅಧ್ಯಕ್ಷ, ಮಾಜಿ ಎಂಎಲ್‌ಸಿ ಎಸ್.ರುದ್ರೇಗೌಡ ಅಧ್ಯಕ್ಷತೆ ವಹಿಸಿದ್ದರು. ನಗರದ ಪ್ರಮುಖ ರಸ್ತೆಗಳಲ್ಲಿ ರ‌್ಯಾಲಿ ನಡೆಸಲಾಯಿತು. ರ‌್ಯಾಲಿಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್, ರೇಂಜರ್ಸ್ ಮತ್ತು ರೋವರ್ಸ್‌ನ 1100 ಮಕ್ಕಳು, 100 ಶಿಕ್ಷಕರು ಭಾಗವಹಿಸಿದ್ದರು. ಎಂಎಲ್‌ಸಿ ಬಲ್ಕಿಷ್ ಬಾನು, ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತ, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯಾ, ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಎಡಿಸಿ ವಿ.ಅಭಿಷೇಕ್, ಜಿಲ್ಲಾ ಮುಖ್ಯ ಆಯುಕ್ತ ಶಕುಂತಲಾ ಚಂದ್ರಶೇಖರ್, ಜಿಲ್ಲಾ ರೋವರ್ ಆಯುಕ್ತ ಕೆ.ರವಿ, ಬಿಇಒ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.