ಶಿವಮೊಗ್ಗದಲ್ಲಿ ದ್ವಿತೀಯ ಪಿಯು ಗಣಿತ ಪ್ರಶ್ನೆಪತ್ರಿಕೆ ಲೀಕ್ । Question paper leak

ಪ್ರಶ್ನೆಪತ್ರಿಕೆ ಲೀಕ್ ಸಾಂದರ್ಭಿಕ ಚಿತ್ರ.
ಪ್ರಶ್ನೆಪತ್ರಿಕೆ ಲೀಕ್ ಸಾಂದರ್ಭಿಕ ಚಿತ್ರ.
Published on

ಪ್ರಮುಖ ಮುಖ್ಯಾಂಶಗಳು

  • ಶಿವಮೊಗ್ಗದಲ್ಲಿ ಬೆಳಕಿಗೆ ಬಂದ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣ
  • ಸಮಗ್ರ ತನಿಖೆ ನಡೆಸಲು ಮುಂದಾದ ಶಿಕ್ಷಣ ಇಲಾಖೆ
  • ಕೋಟೆ ಠಾಣೆಗೆ ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ ದೂರು
ಶಿವಮೊಗ್ಗ: ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಯ ಗಣಿತ ಪ್ರಶ್ನೆಪತ್ರಿಕೆ(Question paper) ಲೀಕ್ ಪ್ರಕರಣ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಶ್ನೆಪತ್ರಿಕೆ ಶಿವಮೊಗ್ಗದ ಕೆಲ ವ್ಯಕ್ತಿಗಳಿಂದ ಸೋರಿಕೆ ಆಗಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಡಿಡಿಪಿಯು(Ddpu) ಚಂದ್ರಪ್ಪ ಗುಂಡಪಲ್ಲಿ, ಬುಧವಾರ ಬೆಳಗ್ಗೆ 10:45ರ ವೇಳೆಗೆ ಪ್ರಶ್ನೆಪತ್ರಿಕೆ ಲೀಕ್ ಆಗಿರುವ ಮಾಹಿತಿ ತಮ್ಮ ಗಮನಕ್ಕೆ ಬಂದಿತ್ತೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. 
ಬೇರೆ ಜಿಲ್ಲೆಗಳಲ್ಲಿ ಶಿವಮೊಗ್ಗದ ಪ್ರಶ್ನೆಪತ್ರಿಕೆ ಹರಿದಾಡುತ್ತಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸ್ ದೂರು ದಾಖಲಿಸಲಾಗಿದೆ. ತುಮಕೂರು ಜಿಲ್ಲೆಯ ಡಿಡಿಪಿಯು ಶಿವಮೊಗ್ಗದ ಡಿಡಿಪಿಯುಗೆ ವಾಟ್ಸ್‌ಆ್ಯಪ್(Whatsapp) ಮೂಲಕ 80 ಅಂಕಗಳ ಗಣಿತ ಪ್ರಶ್ನೆ ಪತ್ರಿಕೆಯನ್ನು ಕಳುಹಿಸಿ ಇದು ಶಿವಮೊಗ್ಗದ ಪ್ರಶ್ನೆಪತ್ರಿಕೆ ಎಂದು ಮಾಹಿತಿ ನೀಡಿದ ಬಳಿಕ ಈ ಪ್ರಕರಣ ಬಹಿರಂಗಗೊಂಡಿದೆ. ಈ ಕುರಿತು ಸಮಗ್ರ ತನಿಖೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಡಿಡಿಪಿಯು ಚಂದ್ರಪ್ಪ ಗುಂಡಪಲ್ಲಿ(Chandrappa gundapalli), ಜಿಲ್ಲೆಯ ಒಂದು 
ಸ್ಟ್ರಾಂಗ್ ರೂಮ್(Strong Room) ಹಾಗೂ ಎಂಟು ನೋಡಲ್ ಕೇಂದ್ರಗಳ ವ್ಯಾಪ್ತಿಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗಿರಬಹುದೆಂಬ ಅನುಮಾನವಿದೆ. ಈ ಹಿನ್ನೆಲೆಯಲ್ಲಿ ಸ್ಟ್ರಾಂಗ್ ರೂಮ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
"

ಜಿಲ್ಲೆಯ ಹೊರಗೆ ಗಣಿತ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವುದು ಪತ್ತೆಯಾಗಿದೆ. ಪ್ರಶ್ನೆಪತ್ರಿಕೆ ಸಾಗಿಸುವ ಹಂತದಲ್ಲೇ ಲೀಕ್ ಆಗಿರಬಹುದೆಂಬ ಶಂಕೆ ಇದ್ದು, ವಿದ್ಯಾರ್ಥಿಗಳ ವಾಟ್ಸ್‌ಆ್ಯಪ್ ಗುಂಪುಗಳಲ್ಲಿ ಪ್ರಶ್ನೆಪತ್ರಿಕೆ ಶೇರ್ ಆಗಿರುವ ಸಾಧ್ಯತೆ ಕುರಿತು ತನಿಖೆ ನಡೆಯುತ್ತಿದೆ. ಆದರೆ ಲೀಕ್ ಆಗಿರುವ ಪ್ರಶ್ನೆಪತ್ರಿಕೆ ಶಿವಮೊಗ್ಗದ ವಿದ್ಯಾರ್ಥಿಗಳಿಗೆ ಸಿಕ್ಕಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net