ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ, ಯುವಕನಿಗೆ 20 ವರ್ಷ ಕಠಿಣ ಶಿಕ್ಷೆ | Sexual Assault

ಪೋಕ್ಸೊ ಪ್ರಕರಣದಲ್ಲಿ ಯುವಕನಿಗೆ ಶಿಕ್ಷೆ.
ಪೋಕ್ಸೊ ಪ್ರಕರಣದಲ್ಲಿ ಯುವಕನಿಗೆ ಶಿಕ್ಷೆ.
Published on

ಪ್ರಮುಖ ಮುಖ್ಯಾಂಶಗಳು

  • ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿದ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
  • ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೊ ಪ್ರಕರಣ
  • ಅಂದಿನ ತನಿಖಾಧಿಕಾರಿಯಾಗಿದ್ದ ಭದ್ರಾವತಿಯ ಎಎಸ್‌ಪಿ ಜಿತೇಂದ್ರಕುಮಾರ್ ದಯಾಮಾ
ಶಿವಮೊಗ್ಗ: ಅಪ್ರಾಪ್ತೆ(Minor) ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಯುವಕನಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1)ವು 20 ವರ್ಷ ಕಠಿಣ ಶಿಕ್ಷೆ ಮತ್ತು 2.50 ಲಕ್ಷ ರೂ. ದಂಡ ವಿಧಿಸಿದೆ.
ಭದ್ರಾವತಿ ತಾಲೂಕಿನ 22 ವರ್ಷದ ಯುವಕ ಶಿಕ್ಷೆಗೆ ಒಳಗಾದವ. ಈತ 2022ರಲ್ಲಿ ಭದ್ರಾವತಿ ತಾಲೂಕಿನ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ(Sexual Assault)ವೆಸಗಿದ್ದ. ಈ ಬಗ್ಗೆ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪೋಕ್ಸೊ ಪ್ರಕರಣ ದಾಖಲಾಗಿತ್ತು.
ಅಂದಿನ ತನಿಖಾಧಿಕಾರಿ(Investigator)ಯಾಗಿದ್ದ ಭದ್ರಾವತಿಯ ಎಎಸ್‌ಪಿ ಜಿತೇಂದ್ರಕುಮಾರ್ ದಯಾಮಾ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ(Judge)ನಿಂಗನಗೌಡ ಭ ಪಾಟೀಲ್ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಯುವಕನಿಗೆ ಕಠಿಣ ಸಜೆ ಮತ್ತು ದಂಡ ವಿಧಿಸಿದ್ದು, ನೊಂದ ಬಾಲಕಿಗೆ 2.25 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಶ್ರೀಧರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net