ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ಇಬ್ಬರಿಗೆ ಜೈಲು ಶಿಕ್ಷೆ Sexual harassment

ಶಿವಮೊಗ್ಗ: ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಅದನ್ನು ವಿರೋಧಿಸಿದ ಆಕೆಯ ತಂದೆಗೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ್ದ ಇಬ್ಬರಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1)ವು ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿದೆ.
Sexual harassment
ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
Published on: 

ಶಿವಮೊಗ್ಗ: ಪ್ರೀತಿಸುವುದಾಗಿ ನಂಬಿಸಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ, ಅದನ್ನು ವಿರೋಧಿಸಿದ ಆಕೆಯ ತಂದೆಗೆ ಚಾಕುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿದ್ದ ಇಬ್ಬರಿಗೆ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್‌ಟಿಎಸ್‌ಸಿ-1)ವು ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿದೆ.

27 ವರ್ಷದ ಮೊದಲನೇ ವ್ಯಕ್ತಿಯು ಪ್ರೀತಿಸುವುದಾಗಿ ನಂಬಿಸಿ 16 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಅದನ್ನು ವಿರೋಧಿಸಿದ ಬಾಲಕಿ ತಂದೆಗೆ 27ನೇ ವರ್ಷದ ಸ್ನೇಹಿತನ ಜತೆ ಸೇರಿ ಮಾರಣಾಂತಿಕ ಹಲ್ಲೆ ನಡೆಸಿದ್ದ. ಈ ಬಗ್ಗೆ ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪೋಕ್ಸೊ ಮತ್ತು ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು.

ಪಿಎಸ್‌ಐ ವಿ.ಶಿವಪ್ರಸಾದ್ ಅವರು ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ನಿಂಗನಗೌಡ ಭ.ಪಾಟೀಲ್ ಅವರು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 1ನೇ ಆಪಾದಿತನಿಗೆ 4 ವರ್ಷ ಕಠಿಣ ಕಾರಾಗೃಹವಾಸ, 1.21 ಲಕ್ಷ ರೂ. ದಂಡ ಮತ್ತು 2ನೇ ಆಪಾದಿತನಿಗೆ 3 ವರ್ಷ ಕಠಿಣ ಕಾರಾಗೃಹವಾಸ ಮತ್ತು 41 ಸಾವಿರ ರೂ. ದಂಡ ವಿಧಿಸಿದ್ದಾರೆ. ಅದರಲ್ಲಿ ನೊಂದ ಬಾಲಕಿಗೆ 1 ಲಕ್ಷ ರೂ. ಹಾಗೂ ಸರ್ಕಾರದಿಂದ 10 ಸಾವಿರ ರೂ. ಪರಿಹಾರ ನೀಡಲು ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕ ಶ್ರೀಧರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.