ಶ್ಯಾಮಾಪ್ರಸಾದ್ ಅವರ ಬದ್ಧತೆ ಸ್ಫೂರ್ತಿದಾಯಕ | bjp office programme

ಶಿಕಾರಿಪುರ ಬಿಜೆಪಿ ಕಚೇರಿಯಲ್ಲಿ ಜನಸಂಘದ ಸಂಸ್ಥಾಪಕ ಡಾ. ಶ್ಯಾಮಾಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ ಆಚರಿಸಲಾಯಿತು. ಕೆ.ಎಸ್.ಗುರುಮೂರ್ತಿ, ಹನುಮಂತಪ್ಪ, ಬೆಣ್ಣೆ ಪ್ರವೀಣ, ರೂಪಾ ರಾಜಶೇಖರ್ ಇತರರಿದ್ದರು.
ಶಿಕಾರಿಪುರ ಬಿಜೆಪಿ ಕಚೇರಿಯಲ್ಲಿ ಜನಸಂಘದ ಸಂಸ್ಥಾಪಕ ಡಾ. ಶ್ಯಾಮಾಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ ಆಚರಿಸಲಾಯಿತು. ಕೆ.ಎಸ್.ಗುರುಮೂರ್ತಿ, ಹನುಮಂತಪ್ಪ, ಬೆಣ್ಣೆ ಪ್ರವೀಣ, ರೂಪಾ ರಾಜಶೇಖರ್ ಇತರರಿದ್ದರು.
Published on
ಶಿಕಾರಿಪುರ: ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮಾಪ್ರಸಾದ್ ಮುಖರ್ಜಿ ಅವರು ನವಭಾರತದ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದ ಮಹಾನ್ ದೇಶಭಕ್ತ ಎಂದು ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ ಬಣ್ಣಿಸಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಡಾ. ಶ್ಯಾಮಾಪ್ರಸಾದ್ ಮುಖರ್ಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಪುಷ್ಪನಮನ ಸಲ್ಲಿಸಿ ಮಾತನಾಡಿದರು.
ಒಂದೇ ದೇಶದಲ್ಲಿ ಎರಡು ಸಂವಿಧಾನ, ಇಬ್ಬರು ಪ್ರಧಾನಿ ಮತ್ತು ಎರಡು ಧ್ವಜಗಳು ಇರಲು ಸಾಧ್ಯವಿಲ್ಲ ಎಂದು ಗಟ್ಟಿಯಾಗಿ ಧ್ವನಿ ಎತ್ತಿದ್ದರು. ಜಮ್ಮು-ಕಾಶ್ಮೀರದ ಏಕೀಕರಣಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದವರು. ಅವರ ಆದರ್ಶ, ಬದ್ಧತೆ ಇಂದಿನ ಯುವ ಪೀಳಿಗೆಗೆ ಪ್ರೇರಣಾದಾಯಕ ಎಂದರು.
ದೇಶದ ಐಕ್ಯತೆ ಮತ್ತು ಸಮಗ್ರತೆಗೆ ಧಕ್ಕೆಯಾದಾಗಲೆಲ್ಲ ಮುಖರ್ಜಿ ಅವರು ಕೈಗೊಂಡ ದಿಟ್ಟ ನಿರ್ಧಾರಗಳನ್ನು ಸ್ಮರಿಸಿದರು. ಅವರ ಹಾದಿಯಲ್ಲಿ ನಾವೆಲ್ಲರೂ ಸಾಗಿ ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಬಿಜೆಪಿ ಮಂಡಲ ಅಧ್ಯಕ್ಷ ಹನುಮಂತಪ್ಪ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬೆಣ್ಣೆ ಪ್ರವೀಣ, ತಾಲೂಕು ಅಧ್ಯಕ್ಷ ವೀರನಗೌಡ, ಬಂಗಾರಿ ನಾಯ್ಕ, ಅಶೋಕ್, ಮಲ್ಲೇಶಪ್ಪ, ಶಿವಪ್ಪ, ಸುರೇಶ್, ರೂಪಾ ರಾಜಶೇಖರ್, ರೂಪಾ ಬಸವರಾಜ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net