ಸಿಎ ಸೈಟ್ ನವೀಕರಣ ಸರಳಗೊಳಿಸಿ I ca sites renewel

ಸಚಿವ ಯತೀಂದ್ರ ಅವರನ್ನು ಭೇಟಿಯಾದ ಡಿ.ಎಸ್.ಅರುಣ್ ಹಾಗೂ ಎಸ್.ಎನ್.ಚನ್ನಬಸಪ್ಪ ಸಿಎ ನಿವೇಶನಗಳ ನವೀಕರಣಕ್ಕೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಗಮನಸೆಳೆದರು.
ಸಚಿವ ಯತೀಂದ್ರ ಅವರನ್ನು ಭೇಟಿಯಾದ ಡಿ.ಎಸ್.ಅರುಣ್ ಹಾಗೂ ಎಸ್.ಎನ್.ಚನ್ನಬಸಪ್ಪ ಸಿಎ ನಿವೇಶನಗಳ ನವೀಕರಣಕ್ಕೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಗಮನಸೆಳೆದರು.
Published on

ಪ್ರಮುಖ ಮುಖ್ಯಾಂಶಗಳು

  • ಶುಲ್ಕದಲ್ಲೂ ರಿಯಾಯಿತಿ ಇರಲಿ
  • ನಗರಾಭಿವೃದ್ಧಿ ಸಚಿವರಿಗೆ ಶಾಸಕಧ್ವಯರ ಆಗ್ರಹ
ಶಿವಮೊಗ್ಗ: ನಗರದ ನೈಜ ಸೇವಾ ಸಂಸ್ಥೆಗಳ ಹಿತದೃಷ್ಟಿಯಿಂದ ಸಿಎ ನಿವೇಶನಗಳ (sites) ನವೀಕರಣ (renewel )ಶುಲ್ಕದಲ್ಲಿ ರಿಯಾಯಿತಿ ನೀಡುವ ಜತೆಗೆ ನಿಯಮಗಳನ್ನು ಸರಳ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, (arun) ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಯತೀಂದ್ರ ಅವರ ಗಮನಸೆಳೆದರು.
ಸಿಎ ನಿವೇಶನಗಳ 30 ವರ್ಷಗಳ ಗುತ್ತಿಗೆ ಅವಧಿ ಮುಗಿದ ನಂತರ ನವೀಕರಣ ಪ್ರಕ್ರಿಯೆಯನ್ನು ಸಂಕೀರ್ಣಗೊಳಿಸದೆ, ಸರಳೀಕೃತ ಮಾಡಬೇಕು. ನಿಯಮ ಉಲ್ಲಂಘಿಸುವ ಅಥವಾ ದುರ್ಬಳಕೆ ಮಾಡಿಕೊಳ್ಳುವ ಸಂಸ್ಥೆಗಳ ವಿರುದ್ಧ ಮಾತ್ರ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳಿಗೆ ಕಾನೂನಿನ ಹೆಸರಿನಲ್ಲಿ ತೊಂದರೆ ನೀಡಬಾರದು ಎಂದು ಒತ್ತಾಯಿಸಿದರು..
ಕಟ್ಟಡ ನಿರ್ಮಾಣಕ್ಕೆ ನಿಗದಿಪಡಿಸಿರುವ ಮೂರು ವರ್ಷಗಳ ಗಡುವನ್ನು ಪ್ರಸ್ತುತ ಸ್ಥಿತಿಗತಿಗಳನ್ನು ಆಧರಿಸಿ ವಿಸ್ತರಿಸಬೇಕು. ಲಾಭರಹಿತ, ಶೈಕ್ಷಣಿಕ, ಕ್ರೀಡೆ ಮತ್ತು ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗಳಿಗೆ ಕಡಿಮೆ ನವೀಕರಣ ಶುಲ್ಕ ಹಾಗೂ ಸಬ್ಸಿಡಿ ದರದಲ್ಲಿ ನಿವೇಶನ ಒದಗಿಸಬೇಕೆಂದು ಮನವಿ ಮಾಡಿದರು.
ಮನವಿಗೆ ಸ್ಪಂದಿಸಿದ ಯತೀಂದ್ರ ಅವರು ಇಲಾಖಾ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ಸಾರ್ವಜನಿಕ ಮತ್ತು ನೈಜ ಸಂಸ್ಥೆಗಳ ಹಿತರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net