ರಿಪ್ಪನ್‌ಪೇಟೆ: ರೋಟರಿ ಸಂಸ್ಥೆ ವಿಶ್ವದ ಎಲ್ಲೆಡೆ ಕಾರ್ಯನಿರ್ವಹಿಸುತ್ತಿದ್ದು, ಲಕ್ಷಾಂತರ ಸದಸ್ಯರು ಸೇವಾ ಕಾರ್ಯಗಳಲ್ಲಿ ಕೈಜೋಡಿಸಿದ್ದಾರೆ ಎಂದು ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಹೇಳಿದರು.
ಪಟ್ಟಣದಲ್ಲಿ ಆಯೋಜಿಸಿದ್ದ ರೋಟರಿ ಪದಾಧಿಕಾರಿಗಳ ಪದವಿ ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಆರೋಗ್ಯ, ಶಿಕ್ಷಣ ಕ್ಷೇತ್ರಗಳಲ್ಲಿ ವಿಶೇಷವಾಗಿ ಕೆಲಸ ಮಾಡುತ್ತಿದೆ. ಸಂಸ್ಥೆ ಜತೆ ಸೇರ್ಪಡೆ ಆಗುವುದರಿಂದ ಹೆಚ್ಚಿನ ನೆರವು ನೀಡಲು ಸಾಧ್ಯ. ಪ್ರತಿಯೊಬ್ಬರೂ ಸೇವಾ ಭಾವನೆ ಬೆಳೆಸಿಕೊಳ್ಳಬೇಕು. ಅಗತ್ಯ ಇರುವವರಿಗೆ ನೆರವು ನೀಡಬೇಕು ಎಂದು ತಿಳಿಸಿದರು.
ನೂತನ ಅಧ್ಯಕ್ಷ ರವೀಂದ್ರ ಬಲ್ಲಾಳ್, ಕಾರ್ಯದರ್ಶಿಯಾಗಿ ರಮೇಶ್ ಹೆಬ್ಬಾರ್ ಅಧಿಕಾರ ಸ್ವೀಕರಿಸಿದರು. ರಿಪ್ಪನ್‌ಪೇಟೆ ಗ್ರಾಪಂ ವ್ಯಾಪ್ತಿಯ ಸಾಧಕ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಸಹಾಯಕ ಗೌರ್ನರ್ ನಾಗರಾಜ್, ವಿಷ್ಣುಮೂರ್ತಿ, ಕೃಷ್ಣರಾಜು ಇತರರಿದ್ದರು.