ಮಲೆನಾಡು ರೈತರ ಸಮಸ್ಯೆ ಬಗೆಹರಿಸಿ | Appeal to KPCC President

ಮಲೆನಾಡು ರೈತರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಹೋರಾಟ ವೇದಿಕೆ ಅಧ್ಯಕ್ಷ ಸಾಗರದ ತೀ.ನ.ಶ್ರೀನಿವಾಸ್ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು.
ಮಲೆನಾಡು ರೈತರ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಹೋರಾಟ ವೇದಿಕೆ ಅಧ್ಯಕ್ಷ ಸಾಗರದ ತೀ.ನ.ಶ್ರೀನಿವಾಸ್ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು.
Published on
ಸಾಗರ: ವಿಧಾನಸಭಾ ಚುನಾವಣೆಗೆ ಮುನ್ನ ಮಲೆನಾಡು ರೈತರ ಸಮಸ್ಯೆ ಬಗೆಹರಿಸಬೇಕು. ಈ ಹಿಂದೆ ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ರೈತರ ಸಮಸ್ಯೆ ಬಗೆಹರಿಸುವುದಾಗಿ ನೀಡಿದ್ದ ಆಶ್ವಾಸನೆ ಈಡೇರಿಸಬೇಕು ಎಂದು ಒತ್ತಾಯಿಸಿ ಮಲೆನಾಡು ರೈತ ಹೋರಾಟ ವೇದಿಕೆ ಅಧ್ಯಕ್ಷ ತೀ.ನ.ಶ್ರೀನಿವಾಸ್ ಬೆಂಗಳೂರಿನಲ್ಲಿ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಮನವಿ ಸಲ್ಲಿಸಿದರು.
2023ರ ವಿಧಾನಸಭಾ ಚುನಾವಣೆ ಪೂರ್ವ ಹಾಲಿ ಸಚಿವ ಮಧು ಬಂಗಾರಪ್ಪ ಆಯನೂರಿನಿಂದ ಶಿವಮೊಗ್ಗವರೆಗೆ ಪಾದಯಾತ್ರೆ ನಡೆಸಿ ಮುಳುಗಡೆ ಸಂತ್ರಸ್ತರಿಗೆ ಹಕ್ಕುಪತ್ರ ನೀಡುವುದು, ಅರಣ್ಯಭೂಮಿ ಸಾಗುವಳಿದಾರರಿಗೆ ನ್ಯಾಯ ದೊರಕಿಸಿ ಕೊಡಬೇಕು ಎಂದು ಒತ್ತಾಯಿಸಿದ್ದರು. ಸಭೆಯಲ್ಲಿ ಅಂದಿನ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಶ್ವಾಸನೆ ನೀಡಿದ್ದರು. ಸರ್ಕಾರ ಬಂದು ಮೂರು ವರ್ಷ ಕಳೆದರೂ ಮಲೆನಾಡು ರೈತರ ಒಂದು ಸಮಸ್ಯೆಯೂ ಬಗೆಹರಿದಿಲ್ಲ ಎಂದು ಗಮನಸೆಳೆದರು.
ಮಲೆನಾಡು ರೈತರ ಸ್ಥಿತಿ ಅಧ್ಯಯನ ಮಾಡಲು ಡಿ.ಕೆ.ಶಿವಕುಮಾರ್ ಸಮಿತಿಯೊಂದನ್ನು ರಚಿಸಿದ್ದರು. ಅದರಲ್ಲಿ ನಾನೂ ಒಬ್ಬ ಸದಸ್ಯನಾಗಿದ್ದು, ಸಮಸ್ಯೆ ಬಗೆಹರಿಸುವ ಕುರಿತು ವಿಸ್ತೃತ ವರದಿ ಸಲ್ಲಿಸಲಾಗಿತ್ತು. ಜಿಲ್ಲೆಯ ಸುಮಾರು 50 ಸಾವಿರ ರೈತರ ಮೇಲೆ ಕೇಸು ಹಾಕಲು ಸಿದ್ಧತೆ ಮಾಡಲಾಗುತ್ತಿದೆ. ನಾಡಿಗೆ ವಿದ್ಯುತ್ ನೀಡಲು ಆಸ್ತಿಪಾಸ್ತಿ ಕಳೆದುಕೊಂಡ ರೈತರ ಮೇಲೆ ಸರ್ಕಾರ ಕರುಣೆ ತೋರಿಸಬೇಕು ಎಂದು ಒತ್ತಾಯಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net