ಕೆರೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ

ಭದ್ರಾವತಿಯಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು  ಉದ್ಘಾಟಿಸಿದರು. ಬಿ.ಕೆ.ಮೋಹನ್, ಎನ್.ಹೇಮಂತ್, ಬಿ.ಎಸ್.ಗಣೇಶ್ ಇತರರಿದ್ದರು.
ಭದ್ರಾವತಿಯಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು ಉದ್ಘಾಟಿಸಿದರು. ಬಿ.ಕೆ.ಮೋಹನ್, ಎನ್.ಹೇಮಂತ್, ಬಿ.ಎಸ್.ಗಣೇಶ್ ಇತರರಿದ್ದರು.
Published on
ಭದ್ರಾವತಿ: ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯುಳ್ಳ ಸಮರ್ಥ ಆಡಳಿತಗಾರರಾಗಿದ್ದರು. ನಗರ ಯೋಜನೆ, ನೀರಾವರಿ, ಕೃಷಿಗೆ ಸಂಬಂಧಿಸಿ ಅವರು ರೂಪಿಸಿದ್ದ ದಕ್ಷ ನೀತಿಗಳಿಂದ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶ ವೇಗವಾಗಿ ಅಭಿವೃದ್ಧಿ ಕಾಣುವಂತಾಯಿತು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು ಹೇಳಿದರು.
ನಗರಸಭೆ, ತಾಲೂಕು ಆಡಳಿತದಿಂದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕೆಂಪೇಗೌಡರು ಕೆರೆಗಳನ್ನು ಅಭಿವೃದ್ಧಿಪಡಿಸುವುದರ ಮೂಲಕ ರೈತರಿಗೆ ನೀರಾವರಿ ಸೌಲಭ್ಯ ಒದಗಿಸಿಕೊಟ್ಟಿದ್ದರು ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ನಗರಸಭೆ ಸದಸ್ಯ ಬಿ.ಕೆ.ಮೋಹನ್, ಆಯುಕ್ತ ಎನ್.ಹೇಮಂತ್, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಘಟಕದ ಅಧ್ಯಕ್ಷ ಬಿ.ಎಸ್.ಗಣೇಶ್ ಮತ್ತಿತರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net