ಅಡ್ಡಪಲ್ಲಕ್ಕಿ ಮಹೋತ್ಸವಕ್ಕೆ ಭರದ ಸಿದ್ಧತೆ I speedy preparation

ರುದ್ರಮುನಿ ಸಜ್ಜನ್, ವೀರಶೈವ ಮಹಾಸಭಾ ಶಿವಮೊಗ್ಗ ಜಿಲ್ಲಾಧ್ಯಕ್ಷ
ರುದ್ರಮುನಿ ಸಜ್ಜನ್, ವೀರಶೈವ ಮಹಾಸಭಾ ಶಿವಮೊಗ್ಗ ಜಿಲ್ಲಾಧ್ಯಕ್ಷ
Published on

ಪ್ರಮುಖ ಮುಖ್ಯಾಂಶಗಳು

  • ಬಸವೇಶ್ವರ ಪಟ್ಟಣ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ
  • ಮಾಜಿ ಸಿಎಂ ಬಿಎಸ್‌ವೈ ಅವರಿಗೆ ಕೃತಜ್ಞತಾ ಸಮರ್ಪಣೆ
ಶಿವಮೊಗ್ಗ: ನಗರದ ಬಸವೇಶ್ವರ (basaveshwara) ಪಟ್ಟಣ ಪತ್ತಿನ ಸಹಕಾರ ಸಂಘದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಸಮಾಜದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಜಗದ್ಗುರು ಪಂಚಪೀಠಾಧೀಶ್ವರರ ಅಡ್ಡಪಲ್ಲಕ್ಕಿ ಮಹೋತ್ಸವ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(yediyurappa) ಕೃತಜ್ಞತಾ ಸಮರ್ಪಣಾ ಸಮಾರಂಭ (programme) ಹಾಗೂ ವಿವಿಧ ಕಾರ್ಯಕ್ರಮಗಳನ್ನು ಮೇ 16 ಮತ್ತು 17ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾರಂಭದ ಸ್ವಾಗತ ಸಮಿತಿ ಉಪಾಧ್ಯಕ್ಷ ರುದ್ರಮುನಿ ಎನ್. ಸಜ್ಜನ್ ತಿಳಿಸಿದರು.
46 ಸದಸ್ಯರೊಂದಿಗೆ 1925ರಲ್ಲಿ ಆರಂಭವಾದ ಬಸವೇಶ್ವರ ಪಟ್ಟಣ ಪತ್ತಿನ ಸಹಕಾರ ಸಂಘ ಪ್ರಸ್ತುತ ಐದು ಸಾವಿರಕ್ಕೂ ಅಧಿಕ ಸದಸ್ಯರು ಹಾಗೂ 14 ಕೋಟಿ ರೂ. ಠೇವಣಿ ಹೊಂದಿದೆ. ಇಂತಹ ಸಂಸ್ಥೆಯ ಶತಮಾನೋತ್ಸವದ ಹಿನ್ನೆಲೆಯಲ್ಲಿ ಅಡ್ಡಪಲ್ಲಕ್ಕಿ ಉತ್ಸವ ನಡೆಯುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಶಿವಮೊಗ್ಗದಲ್ಲಿ 35 ವರ್ಷಗಳ ನಂತರ ನಡೆಯುತ್ತಿರುವ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳ ಸಾವಿರಾರು ಭಕ್ತರು ಪಾಲ್ಗೊಳ್ಳಲಿದ್ದಾರೆ. 17ರ ಮಧ್ಯಾಹ್ನ 3ಕ್ಕೆ ಗಾಂಧಿ ಬಜಾರ್ ಬಸವೇಶ್ವರ ದೇವಾಲಯದಿಂದ ಅಡ್ಡಪಲ್ಲಕ್ಕಿ ಉತ್ಸವ ಆರಂಭವಾಗಿ ಅಲ್ಲಮಪ್ರಭು ಮೈದಾನ ತಲುಪಲಿದೆ. ಅಲ್ಲಿ ಧಾರ್ಮಿಕ ಸಭೆ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿನಂದನಾ ಸಮಾರಂಭ ನಡೆಯಲಿದೆ. ಸುಮಾರು 50 ಸಾವಿರ ಮಂದಿ ಸೇರುವ ನಿರೀಕ್ಷೆಯಿದೆ ಎಂದರು.
ಸ್ವಾಗತ ಸಮಿತಿ ಖಜಾಂಚಿ ಎಸ್.ಪಿ.ದಿನೇಶ್ ಮಾತನಾಡಿ, ಬಸವೇಶ್ವರ ಸೊಸೈಟಿ ಶತಮಾನೋತ್ಸವ ಸಮಾರಂಭವು ಮೇ 16ರ ಬೆಳಗ್ಗೆ 10ಕ್ಕೆ ಕುವೆಂಪು ರಂಗ ಮಂದಿರದಲ್ಲಿ ನಡೆಯಲಿದೆ ಎಂದು ತಿಳಿಸಿದರು.
ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಬಳ್ಳೇಕೆರೆ ಸಂತೋಷ್, ಪ್ರಮುಖರಾದ ಬೆನಕಪ್ಪ, ಚಂದ್ರಯ್ಯ, ವಿರೂಪಾಕ್ಷಪ್ಪ, ವಾಗ್ದೇವಿ, ಸುಜಾತಾ ಬಸವರಾಜ್, ಪಿ.ರುದ್ರೇಶ್, ಪ್ರದೀಪ್ ವಿ. ಎಲಿ ಸುದ್ದಿಗೋಷ್ಠಿಯಲ್ಲಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net