ಬದುಕು ಬಲವಾಗಲು ಅಧ್ಯಾತ್ಮದ ಅರಿವು ಅವಶ್ಯ

ಭದ್ರಾವತಿ ವೀರಶೈವ ಸಭಾಭವನದ ಪಕ್ಕದಲ್ಲಿ ನಿರ್ಮಿಸಿರುವ ಜಗದ್ಗುರು ರಂಭಾಪುರೀಶ ನಿವಾಸ ನೂತನ ಕಟ್ಟಡವನ್ನು ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಉದ್ಘಾಟಿಸಿದರು. ಶ್ರೀ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಆರ್.ಮಹೇಶ್‌ಕುಮಾರ್, ವಾಗೀಶ ಕೋಠಿ ಇತರರಿದ್ದರು.
ಭದ್ರಾವತಿ ವೀರಶೈವ ಸಭಾಭವನದ ಪಕ್ಕದಲ್ಲಿ ನಿರ್ಮಿಸಿರುವ ಜಗದ್ಗುರು ರಂಭಾಪುರೀಶ ನಿವಾಸ ನೂತನ ಕಟ್ಟಡವನ್ನು ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಉದ್ಘಾಟಿಸಿದರು. ಶ್ರೀ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ, ಆರ್.ಮಹೇಶ್‌ಕುಮಾರ್, ವಾಗೀಶ ಕೋಠಿ ಇತರರಿದ್ದರು.
Published on
ಭದ್ರಾವತಿ: ಬದುಕು ಬಲಗೊಳ್ಳಲು ಅಧ್ಯಾತ್ಮದ ಅರಿವು, ನಿರಂತರ ಸಾಧನೆಯಿರಬೇಕು. ಪ್ರಯತ್ನದಿಂದ ಮಾತ್ರ ಒಳ್ಳೆಯ ಕಾರ್ಯಗಳು ನಡೆಯಲು ಸಾಧ್ಯ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು.
ನಗರದಲ್ಲಿ ಸೋಮವಾರ ವೀರಶೈವ ಸಭಾಭವನದ ಪಕ್ಕದಲ್ಲಿ ನಿರ್ಮಿಸಿರುವ ಶ್ರೀ ಜಗದ್ಗುರು ರಂಭಾಪುರೀಶ ನಿವಾಸದ ನೂತನ ಕಟ್ಟಡದ ಉದ್ಘಾಟನೆ ಹಾಗೂ ಧರ್ಮ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.
ಎಲ್ಲರ ಬದುಕಿನಲ್ಲಿ ನ್ಯಾಯ, ನೀತಿ, ಧರ್ಮ ಬೆಳೆಯುವ ಅವಶ್ಯಕತೆ ಇದೆ. ಆತ್ಮವಿಶ್ವಾಸ, ನಿಶ್ಚಿತ ಗುರಿ ಮತ್ತು ಸಂಯಮ ಜೀವನದ ಯಶಸ್ವಿಗೆ ಅಡಿಪಾಯ. ಜಗದ್ಗುರು ರೇಣುಕಾಚಾರ್ಯರು ವೀರಶೈವ ಧರ್ಮ ಸಿದ್ಧಾಂತದಲ್ಲಿ ಕ್ರಿಯಾಶೀಲ ಬದುಕು ಮತ್ತು ಉದಾತ್ತ ವೌಲ್ಯಗಳನ್ನು ಪರಿಪಾಲಿಸಿಕೊಂಡು ನಡೆದರೆ ಜೀವನದಲ್ಲಿ ಯಶಸ್ಸು ಸಾಧ್ಯವೆಂದು ಬೋಸಿದ್ದಾರೆ ಎಂದರು.
ಮಳಲಿ ಸಂಸ್ಥಾನ ಮಠದ ಶ್ರೀ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಚಿನ್ನವಿಲ್ಲದೇ ದಿನ ಕಳೆಯಬಹುದು. ಆದರೆ ಅನ್ನವಿಲ್ಲದೆ ದಿನ ಕಳೆಯಲು ಸಾಧ್ಯವಿಲ್ಲ. ಸತ್ಯ, ಶುದ್ಧ ಕಾಯಕ, ಪ್ರಾಮಾಣಿಕ ಪ್ರಯತ್ನದಿಂದ ಬದುಕು ಉಜ್ವಲವಾಗುವುದು ಎಂದು ತಿಳಿಸಿದರು. ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲದ ಕುಲಪತಿ ಬೆಳಗಾಲಪೇಟೆ ಸಿದ್ದಲಿಂಗ ಶಾಸ್ತ್ರಿ ಮತ್ತು ತಂಡದವರಿಂದ ಶಾಸ್ತ್ರೋಕ್ತವಾಗಿ ಪೂಜಾ ವಿಧಾನಗಳು ನೆರವೇರಿದವು. ವೀರಶೈವ ಸೇವಾ ಸಮಿತಿ ಅಧ್ಯಕ್ಷ ಆರ್.ಮಹೇಶ್‌ಕುಮಾರ್, ಕಾರ್ಯದರ್ಶಿ ವಾಗೀಶ ಕೋಠಿ, ಸಚ್ಚಿದಾನಂದ, ಆನಂದಕುಮಾರ್, ಕೂಡ್ಲಿಗೆರೆ ಹಾಲೇಶ್, ಜಯಣ್ಣ, ಎಡೆಹಳ್ಳಿ ಮಹೆೇಶ್ವರಪ್ಪ, ಮಹೆೇಶ್ವರಪ್ಪ ಗೌಡ, ಹುಬ್ಬಳ್ಳಿಯ ಸಿದ್ದು ಪಾಟೀಲ, ಅಜ್ಜಯ್ಯಸ್ವಾಮಿ, ಎಚ್.ಆರ್.ಅಶೋಕ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net