ಬ್ರಹ್ಮರಥೋತ್ಸವದ ಅಂಗವಾಗಿ ದೇಗುಲದಲ್ಲಿ ಈಗಾಗಲೇ ಧಾರ್ಮಿಕ ವಿಧಿ ವಿಧಾನಗಳು ಆರಂಭವಾಗಿವೆ. ಏ.2ರಂದು ಚೈತ್ರ ಶುದ್ಧ ಪೂರ್ಣಿಮೆಯಂದು ಶ್ರೀ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ ಜರುಗಲಿದೆ. ಶ್ರೀ ಗಣಪತಿ ಪೂಜೆ, ಅಷ್ಟದಿಕ್ಪಾಲಕರ ಮಹಾಬಲಿ ಹಾಗೂ ವೇದ ಮಂತ್ರ ಘೋಷದೊಂದಿಗೆ ಬೆಳಗ್ಗೆ 7-05ರಿಂದ 7-15ರವರೆಗೆ ಮೇಷ ಲಗ್ನದಲ್ಲಿ ನಡೆಯಲಿದೆ. ಸಾಂಪ್ರದಾಯಿಕ ಪೂಜೆ, ಫಲಸಮರ್ಪಣೆ, ಮಹಾಮಂಗಳಾರತಿ ಸಕಲ ವಾದ್ಯಗೋಷ್ಠಿಗಳ ಸೇವೆಯೊಂದಿಗೆ ನೆರವೇರುವುದು. ಏ.4ರವರೆಗೆ ಧಾರ್ಮಿಕ ವಿಧಿಗಳು ನಡೆಯಲಿವೆ. ರಥೋತ್ಸವದ ದಿನ ಸಚಿವರಾದ ಮಧು ಬಂಗಾರಪ್ಪ, ಬಿ. ರಾಮಲಿಂಗಾ ರೆಡ್ಡಿ, ಶಾಸಕರಾದ ಬಿ.ವೈ.ವಿಜಯೇಂದ್ರ.ಬಿ.ಕೆ.ಸಂಗಮೇಶ್ವರ, ಗೋಪಾಲಕೃಷ್ಣ ಬೇಳೂರು, ಸಂಸದ ಬಿ.ವೈ.ರಾಘವೇಂದ್ರ ಮತ್ತಿತರರು ಭಾಗವಹಿಸಿ ದರ್ಶನ ಪಡೆಯುವರು.