ತುಂಗಾ ಚಾನೆಲ್‌ನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನೀರುಪಾಲು | Student Neerupaalu

ಅಬ್ಬಲಗೆರೆ ಸಮೀಪ ತುಂಗಾ ಚಾನೆಲ್‌ನಲ್ಲಿ ಶೋಧ ಕಾರ್ಯ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿ.
ಅಬ್ಬಲಗೆರೆ ಸಮೀಪ ತುಂಗಾ ಚಾನೆಲ್‌ನಲ್ಲಿ ಶೋಧ ಕಾರ್ಯ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿ.
Published on

ಪ್ರಮುಖ ಮುಖ್ಯಾಂಶಗಳು

  • ಅಬ್ಬಲಗೆರೆ ಸಮೀಪ ತುಂಗಾ ಚಾನೆಲ್‌ನಲ್ಲಿ ಈಜಲು ತೆರಳಿದ್ದ ವಿದ್ಯಾರ್ಥಿ
  • ಶಿವಮೊಗ್ಗ ಗೋಪಾಳದ ಖಾಸಗಿ ಶಾಲೆಯ ವಿದ್ಯಾರ್ಥಿ ಕೃಷ್ಣ ನೀರುಪಾಲಾದವ
  • ತುಂಗಾ ಚಾನೆಲ್‌ನಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ವಿದ್ಯಾರ್ಥಿಗಾಗಿ ಹುಡುಕಾಟ
ಶಿವಮೊಗ್ಗ: ಅಬ್ಬಲಗೆರೆ ಸಮೀಪ ತುಂಗಾ ಚಾನೆಲ್‌(Tunga Channel

)ನಲ್ಲಿ ಈಜಲು ತೆರಳಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ(SSLC Student)ಯೊಬ್ಬ ಬುಧವಾರ ನೀರು ಪಾಲಾಗಿದ್ದು, ಆತನಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ತಡರಾತ್ರಿವರೆಗೂ ಶೋಧ ಕಾರ್ಯ ನಡೆಸಿತು.

ಬೊಮ್ಮನಕಟ್ಟೆ ನಿವಾಸಿ ಕೃಷ್ಣ (15) ನೀರುಪಾಲಾದ ವಿದ್ಯಾರ್ಥಿ. ಈತ ಶಿವಮೊಗ್ಗ ಗೋಪಾಳದ ಖಾಸಗಿ ಶಾಲೆ(Gopal's Private School)ಯಲ್ಲಿ ಎಸ್‌ಎಸ್‌ಎಲ್‌ಸಿ ವ್ಯಾಸಂಗ ಮಾಡುತ್ತಿದ್ದ. ಆರು ಬಾಲಕರು ಈಜಾಡಲು ತುಂಗಾ ಚಾನೆಲ್‌ಗೆ ತೆರಳಿದ್ದರು. ಈ ವೇಳೆ ಕೃಷ್ಣ ಮೊದಲು ನೀರಿಗೆ ಇಳಿದು ಈಜಲು ಮುಂದಾಗಿದ್ದಾನೆ. ಆದರೆ ಚಾನೆಲ್‌ನಲ್ಲಿ ನೀರಿನ ಹರಿವು ಹಾಗೂ ಪ್ರಮಾಣ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಆತ ನೀರಿನಲ್ಲಿ ಮುಳುಗಿದ್ದಾನೆ. 
ನೀರಿನಲ್ಲಿ ಕೈ ಬೀಸುತ್ತಿರುವುದನ್ನು ಗಮನಿಸಿದ ಆತನ ಸ್ನೇಹಿತ ಕೂಡಲೇ ಆತನನ್ನು ರಕ್ಷಿಸಲು ಮುಂದಾಗಿದ್ದಾನೆ. ಆದರೆ ಆತನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ (Firefighters) ಸ್ಥಳಕ್ಕೆ ಧಾವಿಸಿದ್ದು, ತುಂಗಾ ಚಾನೆಲ್‌ನಲ್ಲಿ ವಿದ್ಯಾರ್ಥಿಗಾಗಿ ಹುಡುಕಾಟ ಆರಂಭಿಸಿದರು. ಆದರೆ ನೀರಿನ ಹರಿವು ಹೆಚ್ಚಿರುವ ಹಿನ್ನೆಲೆಯಲ್ಲಿ ಶೋಧ ಕಾರ್ಯಕ್ಕೆ ಅಡ್ಡಿಯುಂಟಾಯಿತು ಎನ್ನಲಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು(Shivamogga Rural Police Station) ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net