ಆನವಟ್ಟಿ ಠಾಣೆ ಪಿಎಸ್‌ಐ ಚಂದನ್‌ಕುಮಾರ್ ಮಾತನಾಡಿ, ಯುವಜನರಲ್ಲಿ ಹೆಚ್ಚುತ್ತಿರುವ ಮಾದಕ ವಸ್ತುಗಳ ಬಳಕೆ, ಅಕ್ರಮ ಸಾಗಣೆ, ಸೈಬರ್ ಅಪರಾಧಗಳು, ಆನ್‌ಲೈನ್ ಬೆಟ್ಟಿಂಗ್, ರಸ್ತೆ ಸುರಕ್ಷತೆ, ಮಕ್ಕಳ ಮೇಲಿನ ದೌರ್ಜನ್ಯ, ಪೋಕ್ಸೋ ಕಾಯ್ದೆಯ ಕುರಿತು ಮಾಹಿತಿ ನೀಡಿದರು. ಮಾದಕ ವ್ಯಸನವು ವ್ಯಕ್ತಿಯ ಭವಿಷ್ಯವನ್ನು ಹಾಳುಮಾಡುವ ಜತೆಗೆ ಕುಟುಂಬ ಹಾಗೂ ಸಮಾಜದ ಮೇಲೂ ದುಷ್ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿದರು.