ಖಾಸಗಿ ಕಾಲೇಜುಗಳ ವ್ಯಾಮೋಹ ಬಿಡಿ

ಪ್ಪನ್‌ಪೇಟೆ ಸಮೀಪದ ಅಮೃತದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೂತನ ಕೊಠಡಿಗಳನ್ನು ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಿದರು. ಮಹಮದ್ ನಜ್ಹತ್ ಉಲ್ಲಾ, ರಾಮಚಂದ್ರ, ಬಷೀರ ಅಹಮ್ಮದ್, ಅನಂತಮೂರ್ತಿ, ಸೋಮಶೇಖರ ಇತರರಿದ್ದರು.
ಪ್ಪನ್‌ಪೇಟೆ ಸಮೀಪದ ಅಮೃತದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೂತನ ಕೊಠಡಿಗಳನ್ನು ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಿದರು. ಮಹಮದ್ ನಜ್ಹತ್ ಉಲ್ಲಾ, ರಾಮಚಂದ್ರ, ಬಷೀರ ಅಹಮ್ಮದ್, ಅನಂತಮೂರ್ತಿ, ಸೋಮಶೇಖರ ಇತರರಿದ್ದರು.
Published on
ರಿಪ್ಪನ್‌ಪೇಟೆ: ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವ ಮೂಲಕ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದ್ದು ಪಾಲಕರು ಮಕ್ಕಳನ್ನು ಸರ್ಕಾರಿ ಶಾಲಾ ಕಾಲೇಜುಗಳಿಗೆ ದಾಖಲಿಸುವ ಮೂಲಕ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಸಮೀಪದ ಅಮೃತದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನೂತನ ಕೊಠಡಿಗಳ ಉದ್ಘಾಟನೆ, ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿ, ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಸೂರಿನಡಿ ಶಿಕ್ಷಣ ದೊರೆಯುವ ಕೆಪಿಎಸ್ ಆಗಿ ಮಾರ್ಪಾಟಾಗಿದ್ದು ಅತ್ಯುತ್ತಮ ಶಿಕ್ಷಣ ಕೇಂದ್ರವಾಗಿ ಹೊರಹೊಮ್ಮುತ್ತಿದೆ ಎಂದರು.
ವಿಧಾನ ಪರಿಷತ್ ಸದಸ್ಯೆ ಬಲ್ಕಿಷ್ ಬಾನು ಮಾತನಾಡಿ, ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಸಮಾಜದ ದುರ್ಬಲ ವರ್ಗದವರನ್ನು ಸದೃಢಗೊಳಿಸಲು ಪ್ರಯತ್ನಿಸುತ್ತಿದೆ ಎಂದರು.
ಎಂಎಡಿಬಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಪ್ರಾಚಾರ್ಯರ ಕೊಠಡಿ ಉದ್ಘಾಟಿಸಿ ಮಾತನಾಡಿ, ಸರ್ಕಾರ ನೀಡುತ್ತಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡರೆ ಶಿಕ್ಷಣಕ್ಕೆ ಪೂರಕ ವಾತಾವರಣ ನಿರ್ಮಾಣ ಮಾಡಲು ಸಹಕಾರಿ ಎಂದು ಹೇಳಿದರು.
ಪ್ರಾಚಾರ್ಯ ಮಹಮದ್ ನಜ್ಹತ್ ಉಲ್ಲಾ, ಮುಖಂಡರಾದ ರಾಮಚಂದ್ರ, ಬಷೀರ್ ಅಹಮ್ಮದ್, ಅನಂತಮೂರ್ತಿ, ಸಿಡಿಸಿ ಅಧ್ಯಕ್ಷ ಸೋಮಶೇಖರ, ಗ್ರಾಪಂ ಅಧ್ಯಕ್ಷ ಸಚಿನ್ ಗೌಡ, ಪ್ರಾಧ್ಯಾಪಕರಾದ ಹಾಲಪ್ಪ ಸಂಕೂರ್, ಫ್ರಾನ್ಸಿಸ್ ಬೆಂಜಮಿನ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net