ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹ ಸಂಚಾಲಕ ಲೋಕೇಶ್ ಕಕ್ಕರಸಿ ಮಾತನಾಡಿ, ಗೋಹತ್ಯೆ ಮತ್ತು ಗೋಸಾಗಣೆಯಲ್ಲಿ ತೊಡಗಿದ ಆರೋಪಿಗಳ ಮೇಲೆ ಗೋಹತ್ಯೆ ಪ್ರತಿಬಂಧಕ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ತಾಲೂಕು ಆಡಳಿತ ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಅಕ್ರಮ ಗೋಸಾಗಣೆಯನ್ನು ತಡೆಯಬೇಕಿದೆ ಎಂದು ಒತ್ತಾಯಿಸಿದರು.