ಗ್ರಾಮೀಣ ಸರ್ಕಾರಿ ಶಾಲೆಗಳ ಉಳಿವು ಮುಖ್ಯ

ಹೊಸನಗರ ತಾಲೂಕು ಸಂಪೆಕಟ್ಟೆ ಸಮೀಪ ಹೊಸೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಮೃತಮಹೋತ್ಸವ ಕಾರ್ಯಕ್ರಮವನ್ನು ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಿದರು. ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಕೆ.ವಿ.ಶ್ರೀಧರ ಇತರರಿದ್ದರು.
ಹೊಸನಗರ ತಾಲೂಕು ಸಂಪೆಕಟ್ಟೆ ಸಮೀಪ ಹೊಸೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಮೃತಮಹೋತ್ಸವ ಕಾರ್ಯಕ್ರಮವನ್ನು ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಿದರು. ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಕೆ.ವಿ.ಶ್ರೀಧರ ಇತರರಿದ್ದರು.
Published on
ಹೊಸನಗರ: ಖಾಸಗಿ ಶಾಲೆಗಳ ಅಬ್ಬರದ ನಡುವೆ ಸರ್ಕಾರಿ ಶಾಲೆಗಳು ಅಮೃತಮಹೋತ್ಸವ ಆಚರಿಸಿಕೊಳ್ಳುವುದು ಸಂತಸದ ಸಂಗತಿ. ಸರ್ಕಾರಿ ಶಾಲೆಗಳು ಉಳಿದಾಗ ಗ್ರಾಮೀಣ ಭಾಗದ ಪ್ರತಿ ಮಗುವಿಗೂ ಉತ್ತಮ ಶಿಕ್ಷಣ ಸಿಗಲು ಸಾಧ್ಯ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ತಾಲೂಕಿನ ಸಂಪೆಕಟ್ಟೆ ಸಮೀಪ ಹೊಸೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಶಾಲೆ ಎಂಬ ಕೀಳರಿಮೆ ಪಾಲಕರಿಂದ ದೂರವಾದಾಗ ಸರ್ಕಾರಿ ಶಾಲೆಗಳು ಉಳಿದು ಬೆಳೆಯಲು ಸಾಧ್ಯ ಎಂದರು.
ಸರ್ಕಾರಿ ಶಾಲೆಗಳಲ್ಲಿಯೂ ಎಲ್ಲ ಸೌಕರ್ಯಗಳು ಲಭ್ಯವಿವೆ. ಹೀಗಾಗಿ ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳಿಸಲು ಮುಂದೆ ಬರಬೇಕು. ಇಂದಿನ ಮಕ್ಕಳಿಗೆ ಎಲ್ಲ ರೀತಿಯ ಸೌಕರ್ಯಗಳು ಸಿಗುತ್ತಿದ್ದು, ಮಕ್ಕಳು ಉತ್ತಮ ಶಿಕ್ಷಣ ಪಡೆದು ಮಾದರಿ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಎಸ್‌ಡಿಎಂಸಿ ಅಧ್ಯಕ್ಷ ಕೆ.ವಿ.ಶ್ರೀಧರ, ಅಮೃತಮಹೋತ್ಸವ ಸಮಿತಿ ಅಧ್ಯಕ್ಷ ನಾಗಪ್ಪ ಕೊಟ್ಟಿಗೆಮನೆ, ಮುಖ್ಯಶಿಕ್ಷಕಿ ಗಾಯತ್ರಿ ಶೆಣೈ, ಕೆ.ಕುಮಾರ್, ಸತ್ಯನಾರಾಯಣ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net