ಎಲ್ಲಾ ವಾರ್ಡ್ಗಳಲ್ಲಿಯೂ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ ಎಂದು ಹಲವು ಸದಸ್ಯರು ದೂರಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಹಿರಿಯ ಸದಸ್ಯ ಬಿ.ಕೆ.ಮೋಹನ್, ಮೊದಲು ಅಧಿಕಾರಿಗಳೇ ಸರಿಯಿಲ್ಲ. ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಕೆಲಸ ತೆಗೆದುಕೊಂಡಿದ್ದರೆ ಎಲ್ಲ ವಾರ್ಡ್ನ ಕಾಮಗಾರಿಗಳು ಸಂಪೂರ್ಣವಾಗಿ ಮುಗಿಯುತ್ತಿತ್ತು. ಅಧಿಕಾರಿಗಳು ಸರ್ಕಾರದಿಂದ ಸಿಗುವ ಎಲ್ಲ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಾರೆ. ಆದರೆ ಕೆಲಸ ಮಾತ್ರ ಮಾಡಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಅಧ್ಯೆ ಜೆ.ಸಿ.ಗೀತಾರಾಜ್ ಕುಮಾರ್, ಉಪಾಧ್ಯ ಬಷೀರ್ ಅಹಮದ್, ಸ್ಥಾಯಿ ಸಮಿತಿ ಅಧ್ಯೆ ಪ್ರೇಮಾ ಬದರೀನಾರಾಯಣ್ ಇದ್ದರು.