ಕಾಡಾನೆ ಹಾವಳಿ ತಡೆಗೆ ಶಾಶ್ವತ ಕ್ರಮ ಕೈಗೊಳ್ಳಿ wild elephants Menace

ಶಿವಮೊಗ್ಗ: ಚಿಕ್ಕಮಗಳೂರು-ಹಾಸನ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರುತ್ತಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕಾಡಾನೆಗಳ ದಾಂಧಲೆ ತಡೆಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.
wild elephants Menace
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
Published on: 

ಶಿವಮೊಗ್ಗ: ಚಿಕ್ಕಮಗಳೂರು-ಹಾಸನ ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರುತ್ತಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಕಾಡಾನೆಗಳ ದಾಂಧಲೆ ತಡೆಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದರು.

ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಸೇರಿ ಚಿಕ್ಕಮಗಳೂರಿನ ಮೂವರು ಕಾಂಗ್ರೆಸ್ ಶಾಸಕರು, ಕಾಡಾನೆ ಹಾವಳಿ ನಿಯಂತ್ರಿಸುವಂತೆ ರಾಜ್ಯ ಸರ್ಕಾರದ ಗಮನ ಸೆಳೆದಿದ್ದಾರೆ. ಶಾಸಕರ ಬೇಡಿಕೆ ನ್ಯಾಯಸಮ್ಮತವಾಗಿದ್ದು, ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದರು.

ಕಾಡಾನೆಗಳ ನಿರಂತರ ದಾಳಿಯಿಂದ ಹೊಲ-ಗದ್ದೆಗಳು ನಾಶವಾಗುತ್ತಿವೆ. ಮಲೆನಾಡು ಭಾಗದ ರೈತರು ಬೆಳೆ ನಷ್ಟದ ಜತೆ ಜೀವಭಯದಲ್ಲೂ ಬದುಕುವಂತಾಗಿದೆ. ಅರಣ್ಯಾಧಿಕಾರಿಗಳು ಆನೆಗಳನ್ನು ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ಓಡಿಸುವ ಮೂಲಕ ಸಮಸ್ಯೆಯನ್ನು ಬೇರೆ ಊರಿಗೆ ವರ್ಗಾಯಿಸುತ್ತಿದ್ದಾರೆ. ಈ ರೀತಿ ಕ್ರಮದಿಂದ ಶಾಶ್ವತ ಪರಿಹಾರ ಸಾಧ್ಯವಿಲ್ಲ ಎಂದು ಟೀಕಿಸಿದರು.

ಸೂಕ್ತ ಜಮೀನು ಹಾಗೂ ಅಗತ್ಯ ಗಿಡಮರಗಳಿರುವ ಪ್ರದೇಶಗಳನ್ನು ಗುರುತಿಸಿ ಆನೆ ಕ್ಯಾಂಪ್‌ಗಳನ್ನು ನಿರ್ಮಿಸಬೇಕು. ಕಾಡಾನೆಗಳನ್ನು ಸ್ಥಳಾಂತರಿಸುವ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಪಕ್ಕದ ಊರಿಗೆ ಆನೆಗಳನ್ನು ಓಡಿಸುವುದನ್ನೇ ಪರಿಹಾರ ಎಂದು ಭಾವಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳ ನಡೆ ಸರಿಯಲ್ಲ ಎಂದರು.

ರೈತರ ಬೆಳೆ ಹಾಗೂ ಜೀವ ರಕ್ಷಣೆಗೆ ಆದ್ಯತೆ ನೀಡಬೇಕು. ಶಾಸಕರು ಮುಂದಿಟ್ಟಿರುವ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಶಾಶ್ವತ ಪರಿಹಾರ ರೂಪಿಸುವಂತೆ ಒತ್ತಾಯಿಸಬೇಕು ಎಂದು ತಿಳಿಸಿದರು.