ಕಾರ್ಯಕ್ರಮವನ್ನು ನಾಡೋಜ ಡಾ. ಜಿ.ಶಂಕರ್ ಉದ್ಘಾಟಿಸಲಿದ್ದು, ಕೆ.ಸತೀಶ್ ಮೊಗವೀರ, ಜಯ ಸಿ. ಕೊಟ್ಯಾನ್, ರವೀಶ್ ಎಸ್. ಕೊರವಡಿ, ಆರ್.ಎಸ್.ಚಂದ್ರು, ಜಿ.ಶ್ರೀನಿವಾಸ್ ಉಪಸ್ಥಿತರಿರುವರು. ಇದೇ ಸಂದರ್ಭದಲ್ಲಿ ನಮ್ಮ ಸಮಾಜ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದಿಸುವ ಜತೆಗೆ ವಿದ್ಯಾರ್ಥಿಗಳಿಗೆ ನೋಟ್‌ಬುಕ್, ವಿದ್ಯಾರ್ಥಿ ವೇತನ ವಿತರಿಸಲಾಗುವುದು. ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿಯಲ್ಲಿ ಸಮುದಾಯದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆೆ ಹೊಂದಿದ್ದಾರೆ ಎಂದರು.