ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ ಕಲಿಸಿ

ಭದ್ರಾವತಿಯಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣ ದೇವಸ್ಥಾನದ 2ನೇ ವಾರ್ಷಿಕೋತ್ಸವದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಸನ್ಮಾನಿಸಲಾಯಿತು. ಶ್ರೀ ಯಾದವಾನಂದ ಸ್ವಾಮೀಜಿ, ವೆಂಕಟೇಶಪ್ಪ, ಸಿ.ಕೆ.ಚನ್ನಕೇಶವ ಇತರರಿದ್ದರು.
ಭದ್ರಾವತಿಯಲ್ಲಿ ಆಯೋಜಿಸಿದ್ದ ಶ್ರೀ ಕೃಷ್ಣ ದೇವಸ್ಥಾನದ 2ನೇ ವಾರ್ಷಿಕೋತ್ಸವದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಸನ್ಮಾನಿಸಲಾಯಿತು. ಶ್ರೀ ಯಾದವಾನಂದ ಸ್ವಾಮೀಜಿ, ವೆಂಕಟೇಶಪ್ಪ, ಸಿ.ಕೆ.ಚನ್ನಕೇಶವ ಇತರರಿದ್ದರು.
Published on
ಭದ್ರಾವತಿ: ಮಕ್ಕಳಿಗೆ ಬಾಲ್ಯದಿಂದಲೇ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ನೀಡಬೇಕು ಎಂದು ಚಿತ್ರದುರ್ಗ ಗೊಲ್ಲಗಿರಿಯ ಅಖಿಲ ಭಾರತ ಯಾದವ ಮಹಾಸಂಸ್ಥಾನದ ಶ್ರೀ ಯಾದವಾನಂದ ಸ್ವಾಮೀಜಿ ಹೇಳಿದರು.
ನಗರದಲ್ಲಿ ತಾಲೂಕು ಗೊಲ್ಲ-ಯಾದವ ಸಂಘದಿಂದ ಏರ್ಪಡಿಸಿದ್ದ ಶ್ರೀ ಕೃಷ್ಣ ದೇವಸ್ಥಾನದ 2ನೇ ವಾರ್ಷಿಕೋತ್ಸವ, ರಥೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಸಮಾಜದಲ್ಲಿ ಮಾನವೀಯ ಗುಣಗಳು ಕಣ್ಮರೆಯಾಗುತ್ತಿವೆ. ಮಕ್ಕಳು ಮೊದಲು ಮಾನವ ಧರ್ಮವನ್ನು ಪ್ರೀತಿಸಬೇಕು. ಸಂಸ್ಕಾರಗಳನ್ನು ರೂಢಿಸಿಕೊಂಡಾಗ ಸಮಾಜದಲ್ಲಿ ಎಲ್ಲರೊಂದಿಗೆ ಸೌಹಾರ್ದದಿಂದ ಬದುಕಲು ಸಾಧ್ಯ. ಶ್ರೀಕೃಷ್ಣನ ಸಂದೇಶಗಳನ್ನು ನಾವೆಲ್ಲರೂ ಅರಿತು ಮುನ್ನಡೆಯಬೇಕು ಎಂದು ತಿಳಿಸಿದರು.
ಶಾಸಕ ಬಿ.ಕೆ.ಸಂಗಮೇಶ್ವರ್ ಮಾತನಾಡಿ, ನಗರದಲ್ಲಿ ಯಾದವ ಸಮಾಜದವರು ಉತ್ತಮ ಸೌಹಾರ್ದದಿಂದ ಇದ್ದಾರೆ ಎಂದರು. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ದೇವರ ರಾಜಬೀದಿ ಉತ್ಸವ ನಡೆಯಿತು. ಶ್ರೀ ಕೃಷ್ಣ ದೇವಸ್ಥಾನದಲ್ಲಿ ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಎಂಎಲ್‌ಸಿ ಬಲ್ಕಿಷ್ ಬಾನು, ಗೊಲ್ಲ-ಯಾದವ ಸಂಘದ ಅಧ್ಯಕ್ಷ ವೆಂಕಟೇಶಪ್ಪ ಮೊಳಕಾಲ್ಮೂರು, ವಕೀಲ ಎಚ್.ಎಲ್.ವಿಶ್ವನಾಥ್, ಲೆಕ್ಕ ಪರಿಶೋಧಕ ಜಿ.ಧರ್ಮಪ್ರಸಾದ್, ಸಂಘದ ಗೌರವಾಧ್ಯಕ್ಷ ವಿ.ಲೋಕೇಶಪ್ಪ, ಉಪಾಧ್ಯಕ್ಷ ಎಂ.ಎಚ್.ತಿಪ್ಪೇಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಿ.ಕೆ.ಚನ್ನಕೇಶವ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net