ಭದ್ರಾ ಮೇಲ್ದಂಡೆ ಯೋಜನೆಗಳಿಗೆ ತಾಂತ್ರಿಕ ಅಡೆತಡೆ | Bhadra Upper River Project

ಭದ್ರಾ ಜಲಾಶಯಕ್ಕೆ ಜಲ ಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
ಭದ್ರಾ ಜಲಾಶಯಕ್ಕೆ ಜಲ ಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಭೂಸ್ವಾಧೀನ, ಅರಣ್ಯ ಇಲಾಖೆ ಅಡೆತಡೆ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ
  • ಎತ್ತಿನಹೊಳೆ, ಭದ್ರಾ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳ ಪರಿಶೀಲನೆ
  • ಶಿವಮೊಗ್ಗದಲ್ಲಿ ಜಲ ಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ
ಶಿವಮೊಗ್ಗ: ಭದ್ರಾ ಹಾಗೂ ಭದ್ರಾ ಮೇಲ್ದಂಡೆ ಯೋಜನೆ(Bhadra Upper River Project)ಗಳಿಗೆ ಸಂಬಂಧಿಸಿದಂತೆ ಭೂಸ್ವಾಧೀನ ಹಾಗೂ ಅರಣ್ಯ ಇಲಾಖೆಯ ಕೆಲ ತಾಂತ್ರಿಕ ಅಡೆತಡೆಗಳಿದ್ದು, ಅವುಗಳನ್ನು ಶೀಘ್ರ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಲ ಸಂಪನ್ಮೂಲ ಸಚಿವ ರಾಮಲಿಂಗಾ ರೆಡ್ಡಿ(Ramalinga Reddy)ಹೇಳಿದರು. 
ಭದ್ರಾ ಜಲಾಶಯಕ್ಕೆ ಭಾನುವಾರ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಎತ್ತಿನಹೊಳೆ, ಭದ್ರಾ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳನ್ನು ಪರಿಶೀಲಿಸಿದ್ದು, ಈ ಯೋಜನೆಗಳು ಬಹಳ ದಿನಗಳ ಕನಸಾಗಿವೆ. ನೀರಾವರಿ ಹಾಗೂ ಕುಡಿಯುವ ನೀರಿನ ದೃಷ್ಟಿಯಿಂದಲೂ ಅತ್ಯಂತ ಮಹತ್ವದ್ದಾಗಿವೆ ಎಂದರು.
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5,300 ಕೋಟಿ ರೂ. ಅನುದಾನ ಘೋಷಿಸಿತ್ತು. ಅದನ್ನು ರಾಷ್ಟ್ರೀಯ ಯೋಜನೆ(National plan) ಎಂದು ಘೋಷಿಸಿ ಹಣ ನೀಡುವುದಾಗಿ ತಿಳಿಸಿತ್ತು. ರಾಜ್ಯ ಸರ್ಕಾರ ಈಗಾಗಲೇ ಈ ಯೋಜನೆಗೆ ಸುಮಾರು 12 ಸಾವಿರ ಕೋಟಿ ರೂ. ವೆಚ್ಚ ಮಾಡಿದೆ. ಆದರೆ ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ಪಾಲು ನೀಡಿಲ್ಲ. ಬಜೆಟ್‌ನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಘೋಷಣೆ ಮಾಡಿದ್ದರು. ಒಂದೇ ಬಾರಿ ಸಾಧ್ಯವಾಗದಿದ್ದರೂ ಕಂತು ಕಂತುಗಳಲ್ಲಾದರೂ ಅನುದಾನ ಬಿಡುಗಡೆ ಮಾಡಲಿ ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net