ವೈಭವದ ಕೆಂಚನಾಲ ಮಾರಿಜಾತ್ರೆ

 ರಿಪ್ಪನ್‌ಪೇಟೆ ಸಮೀಪದ ಕೆಂಚನಾಲದ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದಲ್ಲಿ ತಹಸೀಲ್ದಾರ್ ಭರತ್‌ರಾಜ್ ವಿಶೇಷ ಪೂಜೆ ಸಲ್ಲಿಸಿದರು.
ರಿಪ್ಪನ್‌ಪೇಟೆ ಸಮೀಪದ ಕೆಂಚನಾಲದ ಶ್ರೀ ಮಾರಿಕಾಂಬಾ ದೇವಿ ಜಾತ್ರಾ ಮಹೋತ್ಸವದಲ್ಲಿ ತಹಸೀಲ್ದಾರ್ ಭರತ್‌ರಾಜ್ ವಿಶೇಷ ಪೂಜೆ ಸಲ್ಲಿಸಿದರು.
Published on
ರಿಪ್ಪನ್‌ಪೇಟೆ: ಕೆಂಚನಾಲ ಶ್ರೀ ಮಾರಿಕಾಂಬಾ ದೇವಿಯ ಬೇಸಿಗೆ ಕಾಲದ ಜಾತ್ರಾ ಮಹೋತ್ಸವ ಬುಧವಾರ ವಿಜೃಂಭಣೆಯಿಂದ ಜರುಗಿತು. ನಸುಕಿನಲ್ಲಿ ಪೂಜಾರಗೊಪ್ಪದ ತವರುಮನೆಯಿಂದ ಸಾಂಪ್ರದಾಯಿಕವಾಗಿ ದೇವಿಯ ಉತ್ಸವಮೂರ್ತಿಯನ್ನು ಪಲ್ಲಕ್ಕಿಯ ಮೇಲೆ ಮಂಗಳವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ಕರೆತಂದು ಗಂಡನಮನೆ ಎಂದು ಪ್ರತೀತಿಯಿರುವ ಕೆಂಚನಾಲದ ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಯಿತು.
ಮಾರಿಕಾಂಬೆಗೆ ವಿಶೇಷ ಅಲಂಕಾರ, ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ಜರುಗಿದವು. ಮುಂಜಾನೆಯಿಂದಲೇ ದೇವಿಯ ದರ್ಶನಕ್ಕಾಗಿ ಆಗಮಿಸಿದ ಸಾವಿರಾರು ಭಕ್ತರು ಹಣ್ಣುಕಾಯಿ ನೈವೇದ್ಯ ಅರ್ಪಿಸಿದರು.
 ದೇವಸ್ಥಾನಕ್ಕೆ ತೆರಳುವ ಮಾರ್ಗಗಳ ಇಕ್ಕೆಲಗಳಲ್ಲಿ ಹಣ್ಣು ಕಾಯಿ, ಹೂವು, ತಿಂಡಿ ತಿನಿಸು, ಮಕ್ಕಳ ಆಟಿಕೆ ಸಾಮಗ್ರಿ, ಮಹಿಳೆಯರ ಅಲಂಕಾರಿಕ ವಸ್ತುಗಳ ಮಾರಾಟ ಮಳಿಗೆಗಳನ್ನು ತೆರೆಯಲಾಗಿತ್ತು.
ಜಾತ್ರಾ ಮಹೋತ್ಸವದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು, ತಹಸೀಲ್ದಾರ್ ಭರತ್ ರಾಜ್, ಉಪತಹಸೀಲ್ದಾರ್ ಗೌತಮ್, ಗ್ರಾಪಂ ಅಧ್ಯಕ್ಷ ಮಹಮ್ಮದ್ ಷರ್ೀ, ಸಮಿತಿಯ ಪರಮೇಶ್ ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net