ಸಾಗರ: ತಾಲೂಕಿನಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಮರ್ಪಕವಾಗಿ ನಡೆಯುತ್ತಿದ್ದು, ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದು ಉಪವಿಭಾಗಾಧಿಕಾರಿ ವೀರೇಶ್‌ಕುಮಾರ್ ಹೇಳಿದರು.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಿನ್ನೆಲೆಯಲ್ಲಿ ಶ್ರೀಧರನಗರಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿ, ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ಎಲ್ಲರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಗಣತಿದಾರರು ಮಾಹಿತಿ ಸಂಗ್ರಹಕ್ಕೆ ಬಂದಾಗ ಸೂಕ್ತ ದಾಖಲೆ ನೀಡಿ ಸಹಕರಿಸಬೇಕು ಎಂದು ತಿಳಿಸಿದರು.