ಶಿವಮೊಗ್ಗ: ಚುನಾವಣಾ ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಅಧಿಕಾರಿ(Booth level officer)(ಬಿಎಲ್‌ಒ)ಗಳ ಪಾತ್ರ ಮಹತ್ವದ್ದಾಗಿದ್ದು, ಮತದಾರರ ಪಟ್ಟಿ ನಿರ್ವಹಣೆ, ಹೊಸ ಮತದಾರರ ಸೇರ್ಪಡೆ, ಮೃತರು ಹಾಗೂ ಸ್ಥಳಾಂತರಗೊಂಡವರ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವುದು, ಮತದಾರರ ವಿವರಗಳ ತಿದ್ದುಪಡಿ ಸೇರಿ ಹಲವು ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಕೆ.ಮಾಯಣ್ಣ ಗೌಡ ಹೇಳಿದರು.