ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ.ಅಶೋಕ್ ಮಾತನಾಡಿ, ತಾಲೂಕಿನಲ್ಲಿ 179 ಬೂತ್‌ಗಳಲ್ಲಿ ಲಸಿಕೆ ಹಾಕಲಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯರು, ನಿರ್ಮಲಾ ಆಸ್ಪತ್ರೆ, ಅಂಬೇಡ್ಕರ್ ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 675 ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 22,354 ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದೆ. ನಗರ ಪ್ರದೇಶದಲ್ಲಿ 4, ಗ್ರಾಮೀಣ ಭಾಗದಲ್ಲಿ 3 ದಿನ ನಡೆಯಲಿದೆ ಎಂದರು.