ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಅಪಾರ

ಭದ್ರಾವತಿ: ಸರ್ಕಾರದ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ಮಾಹಿತಿಯನ್ನು ಸಮಾಜದ ಪ್ರತಿಯೊಬ್ಬರಿಗೂ ತಲುಪಿಸಲು ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದರು.
Bjp
ಭದ್ರಾವತಿ ಬಿಜೆಪಿ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ ಅಳಿಸಿ ಅಭಿಯಾನದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಡಾ. ಧನಂಜಯ ಸರ್ಜಿ ಮಾತನಾಡಿದರು. ಜಿ.ಧರ್ಮಪ್ರಸಾದ್, ಕೆಎ.ಚ್.ತೀರ್ಥಯ್ಯ ಇತರರಿದ್ದರು.
Published on: 

ಭದ್ರಾವತಿ: ಸರ್ಕಾರದ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ಮಾಹಿತಿಯನ್ನು ಸಮಾಜದ ಪ್ರತಿಯೊಬ್ಬರಿಗೂ ತಲುಪಿಸಲು ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದರು.

ಬಿಜೆಪಿ ಕಾರ್ಯಾಲಯದಲ್ಲಿ ಏರ್ಪಡಿಸಿದ್ದ ಪ್ರಜಾಪ್ರಭುತ್ವ ಉಳಿಸಿ ಅರಾಜಕತೆ ಅಳಿಸಿ ಅಭಿಯಾನದ ಪೂರ್ವಭಾವಿ ಸಿದ್ಧತಾ ಸಭೆ, ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದ ಆಡಳಿತಾವಧಿಯಲ್ಲಿ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯ, ಮೂಲ ಸೌಕರ್ಯ, ಡಿಜಿಟಲ್ ಕ್ರಾಂತಿ, ಯುವಜನರಿಗೆ ದೊರೆಯುತ್ತಿರುವ ಅವಕಾಶ, ದೇಶದ ಆರ್ಥಿಕ ಪ್ರಗತಿ ಸೇರಿ ವಿವಿಧ ಕ್ಷೇತ್ರದ ಸಾಧನೆ ಮತ್ತು ಜನಪರ ಯೋಜನೆಗಳ ಕುರಿತು ಜನಸಾಮಾನ್ಯರಿಗೆ ಹಾಗೂ ಯುವಪೀಳಿಗೆಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಬೇಕಿದೆ. ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳ ಸಿದ್ಧತೆಯನ್ನು ಕಾರ್ಯಕರ್ತರು ಮಾಡಿಕೊಳ್ಳಬೇಕು ಎಂದರು.

ನಗರ ಮಂಡಲ ಅಧ್ಯಕ್ಷ ಜಿ.ಧರ್ಮಪ್ರಸಾದ್, ಗ್ರಾಮಾಂತರ ಅಧ್ಯಕ್ಷ ಕೆ.ಎಚ್.ತೀರ್ಥಯ್ಯ, ಪ್ರಧಾನ ಕಾರ್ಯದರ್ಶಿ ಚನ್ನೇಶ್, ಹನುಮಂತ ನಾಯ್ಕ, ಅಣ್ಣಪ್ಪ, ರಘುರಾವ್, ಸರಸ್ವತಿ ಇತರರಿದ್ದರು.