ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯಕ್ಕೆ ಬಡತನ । B.Y.Vijayendra

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
Published on

ಪ್ರಮುಖ ಮುಖ್ಯಾಂಶಗಳು

  • ರಾಜ್ಯದಲ್ಲಿ ಅಧಿಕಾರದಲ್ಲಿವರೆಗೆ ಕೊಲೆ, ಸುಲಿಗೆಯಂತಹ ಘಟನೆಗಳಿಗೆ ಕಡಿವಾಣ ಹಾಕಲು ಸಾಧ್ಯವಿಲ್ಲ
  • ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ, ಯಾರು ಏನೇ ಮಾಡಿದರೂ ನಡೆತ್ತದೆಂಬ ವಾತಾವರಣ ನಿರ್ಮಾಣ
  • ಶಿವಮೊಗ್ಗದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ದ್ಗಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ವಾಗ್ದಾಳಿ
ಶಿವಮೊಗ್ಗ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯಕ್ಕೆ ಬಡತನ ಕಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ(B.Y.Vijayendra) ತೀವ್ರ ವಾಗ್ದಾಳಿ ನಡೆಸಿದರು.
ನಗರದ ಹೊರವಲಯದ ಸೂಳೇಬೈಲ್‌ನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಿವರೆಗೂ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿ ಇರುತ್ತದೆಯೋ ಅಲ್ಲಿವರೆಗೆ ಕೊಲೆ, ಸುಲಿಗೆಯಂತಹ ಘಟನೆಗಳಿಗೆ ಕಡಿವಾಣ ಹಾಕಲು ಸಾಧ್ಯವಿಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.
ಮುಖ್ಯಮಂತ್ರಿಯಾದಿಯಾಗಿ ಎಲ್ಲ ಸಚಿವರೂ ಅಧಿಕಾರದ ಮದದಿಂದ ನಡೆದುಕೊಳ್ಳುತ್ತಿದ್ದಾರೆ. ಗೃಹ ಸಚಿವರ ಬೇಜವಾಬ್ದಾರಿತನದ ಹೇಳಿಕೆ, ರಾಜ್ಯ ಸರ್ಕಾರದ ಅಲ್ಪಸಂಖ್ಯಾತರ(Minority) ಓಲೈಕೆ ರಾಜಕಾರಣ ಹಾಗೂ ಯಾರು ಏನೇ ಮಾಡಿದರೂ ನಡೆತ್ತದೆಂಬ ವಾತಾವರಣ ರಾಜ್ಯದಲ್ಲಿ ನಿರ್ಮಾಣಗೊಂಡಿದೆ. ಪೊಲೀಸ್ ಇಲಾಖೆ(Police dept) ಬಗ್ಗೆ ಜನರಲ್ಲಿ ಭಯ ಇಲ್ಲದಂತಾಗಿದೆ. ಇದರೊಂದಿಗೆ ರಾಜ್ಯ ಸರ್ಕಾರದ ಹೊಣೆಗೇಡಿತನ ಬಹಿರಂಗಗೊಂಡಿದೆ ಎಂದರು.
ರಾಜ್ಯದ ಜನ ಇನ್ನೂ ಏನೇನು ಅನುಭವಿಸಬೇಕಿದೆಯೋ ಗೊತ್ತಿಲ್ಲ. ಗ್ಯಾರಂಟಿಯಲ್ಲಿ ಸರ್ಕಾರ ಮುಳುಗಿಹೋಗಿದ್ದು, ಸರ್ಕಾರದ ಆರನೇ ಗ್ಯಾರಂಟಿ(Sixth guarantee)ಯಾಗಿ ಬೆಲೆ ಏರಿಕೆ ಜನರಿಗೆ ಕೊಡುಗೆಯಾಗಿ ನೀಡಲಾಗಿದೆ. ಎರಡೂವರೆ ವರ್ಷದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲಕ ಸಾಮಾನ್ಯ ಜನರಿಗೆ, ಬಡವರಿಗೆ ಬರೆ ಎಳೆಯುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿಕೊಂಡು ಬರುತ್ತಿದೆ. ಗ್ಯಾರಂಟಿಗೆ ಹಣವನ್ನು ಕ್ರೂಢೀಕರಿಸಲು ಸಾಧ್ಯವಾಗದೆ ಸರ್ಕಾರಕ್ಕೆ ಹೊರೆಯಾಗಿದೆ. ಯಾವ ತಾಲೂಕಿಗೆ ಹೋದರೂ ಜನ ಸರ್ಕಾರದ ವಿರುದ್ಧ ಇಡೀ ಶಾಪ ಹಾಕುತ್ತಿದ್ದಾರೆ. ಮತ್ತೊಂದೆಡೆ ಆಡಳಿತ ಪಕ್ಷದ ಶಾಸಕರು ವಿದೇಶಕ್ಕೆ ಹೋಗಿದ್ದಾರೆ. ಗ್ಯಾರಂಟಿಗಳನ್ನು ನಂಬಿಕೊಂಡು ದಿನ ದೂಡುವ ಪರಿಸ್ಥಿತಿಗೆ ಸರ್ಕಾರ ಬಂದಿದೆ ಎಂದು ಕಿಡಿಕಾರಿದರು.
ರಾಜ್ಯದ ಅಭಿವೃದ್ಧಿ ಬಗ್ಗೆ ಸಂಪೂರ್ಣವಾಗಿ ಮರೆತು ಮುಖ್ಯಮಂತ್ರಿಗಳ ಸ್ಥಾನಕ್ಕಾಗಿ ಕಳೆದೊಂದು ವರ್ಷದಿಂದ ಕಾಳಗ ನಡೆಯುತ್ತಿದೆ. ಒಂದು ಕಡೆ ಶಾಸಕರ ವಿದೇಶ ಪ್ರವಾಸ, ಮತ್ತೊಂದು ಕಡೆಯಲ್ಲಿ ಶಾಸಕರ ದೆಹಲಿ ಪ್ರವಾಸ ಮುಂದುವರಿದಿದೆ. ಇವರ ಹಗ್ಗಜಗ್ಗಾಟದಲ್ಲಿ ಕೂಸು ಬಡವಾದ ರೀತಿಯಲ್ಲಿ ರಾಜ್ಯದ ಜನ ಪರಿತಪಿಸುತ್ತಿದ್ದಾರೆ ಎಂದು ಟೀಕಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net