ಜಿಲ್ಲೆಯಲ್ಲಿ ಎಲ್ಪಿಜಿ ಸಿಲಿಂಡರ್‌ಗಳ ಕೊರತೆ ಇಲ್ಲ | LPG cylinder

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ
ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ
Published on
ಶಿವಮೊಗ್ಗ: ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಸಿಲಿಂಡರ್‌(Cylinder)ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇಲ್ಲ. ಈ ಕಾರಣದಿಂದ ಗ್ರಾಹಕರು ಸಾಮಾಜಿಕ ಜಾಲತಾಣ(Social network)ಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಕಿವಿಗೊಡಬಾರದು. ಹಾಗೆಯೇ ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಬಾರದೆಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ  ತಿಳಿಸಿದ್ದಾರೆ. 
ಹೆಚ್ಚಿನ ಗ್ರಾಹಕರು ಒಂದು ರಿಫಿಲ್ಲಿಂಗ್ ಸಿಲಿಂಡರ್(Refilling cylinder) ಪಡೆದ ನಂತರ ಸಿಂಗಲ್ ಗೃಹ ಬಳಕೆ ಸಿಲಿಂಡರ್‌ಗೆ 25 ದಿನಗಳ ಅಂತರ ಮತ್ತು ಡಬ್ಬಲ್ ಸಿಲಿಂಡರ್ ಗೃಹ ಬಳಕೆಯವರು 30 ದಿನಗಳ ನಂತರ ಮತ್ತೊಂದು ಸಿಲಿಂಡರ್ ಬುಕಿಂಗ್ ಮಾಡಬೇಕು. ಅದಕ್ಕೂ ಮುಂಚಿತವಾಗಿ ಬುಕಿಂಗ್ ಮಾಡಬಾರದು. ಎಲ್ಪಿಜಿ ಅಡುಗೆ ಅನಿಲ ಸಿಲಿಂಡರ್‌ಗೆ ಸಂಬಂಧಿಸಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕರ ಕಚೇರಿಯಲ್ಲಿ ಸಹಾಯವಾಣಿ(Helpline) ತೆರೆಯಲಾಗಿದೆ ಎಂದು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net