ಶಿಕ್ಷಣಕ್ಕೆ ಪೂರಕ ವಾತಾವರಣವಿರಲಿ

ಕೊಡಚಾದ್ರಿ ಕಾಲೇಜಿಗೆ ಗ್ರಂಥಾಲಯ ಕೊಡುಗೆ ನೀಡಿದ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಸನ್ಮಾನಿಸಲಾಯಿತು. ಉಮೇಶ್, ಜಿ.ಎನ್.ಪ್ರವೀಣ್, ಚಿದಂಬರ್, ಸುಬ್ರಹ್ಮಣ್ಯ ಇತರರಿದ್ದರು.
ಕೊಡಚಾದ್ರಿ ಕಾಲೇಜಿಗೆ ಗ್ರಂಥಾಲಯ ಕೊಡುಗೆ ನೀಡಿದ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ಸನ್ಮಾನಿಸಲಾಯಿತು. ಉಮೇಶ್, ಜಿ.ಎನ್.ಪ್ರವೀಣ್, ಚಿದಂಬರ್, ಸುಬ್ರಹ್ಮಣ್ಯ ಇತರರಿದ್ದರು.
Published on
ಹೊಸನಗರ: ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಶಾಲೆಗಳಿಗೆ ಸುಸಜ್ಜಿತ ಕಟ್ಟಡ ಹಾಗೂ ಕಲಿಕೆಗೆ ಪೂರಕ ವಾತಾವರಣ ಒದಗಿಸುವುದು ಉದ್ದೇಶ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಹೊಸನಗರ ಕೊಡಚಾದ್ರಿ ಪ್ರಥಮದರ್ಜೆ ಕಾಲೇಜು ಆವರಣದಲ್ಲಿ ನೂತನ ಗ್ರಂಥಾಲಯ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಈ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅನುಕೂಲವಾಗುವ ನಿಟ್ಟಿನಲ್ಲಿ ವಿವಿಧ ಯೋಜನೆಗಳಡಿ ಅನುದಾನಗಳನ್ನು ತಂದು ಕಂಪ್ಯೂಟರ್ ಲ್ಯಾಬ್, ಕಟ್ಟಡ ನವೀಕರಣ, ಸಭಾಂಗಣ ನಿರ್ಮಿಸಲಾಗಿದೆ. ಇದೀಗ 2 ಕೋಟಿ ರೂ. ವೆಚ್ಚದಲ್ಲಿ ಗ್ರಂಥಾಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದೇನೆ ಎಂದರು.
ಕಾಲೇಜುಗಳಲ್ಲಿ ಶಿಕ್ಷಣಕ್ಕೆ ಪೂರಕವಾದಂತಹ ವಾತಾವರಣ ಇದ್ದರೆ ಮಾತ್ರ ಪಾಲಕರು ಮಕ್ಕಳನ್ನು ಆ ವಿದ್ಯಾಸಂಸ್ಥೆಗೆ ಕಳುಹಿಸುತ್ತಾರೆ. ಈ ನಿಟ್ಟಿನಲ್ಲಿ ಹೊಸನಗರ ಕೊಡಚಾದ್ರಿ ಸರ್ಕಾರಿ ಪ್ರಥಮದರ್ಜೆ ಕಾಲೇಜು ಅತ್ಯಂತ ವ್ಯವಸ್ಥಿತ ವಾತಾವರಣ ಹೊಂದಿದೆ. ಕಾಲೇಜು ಕಟ್ಟಡಕ್ಕೆ ಬಣ್ಣ ಹೆಚ್ಚುವ ಕೆಲಸ ಆರಂಭವಾಗಲಿದೆ. ವಿದ್ಯಾರ್ಥಿಗಳು ಯಾವುದೇ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಕಾಲೇಜಿನ ಪ್ರಾಚಾರ್ಯ ಉಮೇಶ್, ಗ್ರಾಪಂ ಅಧ್ಯಕ್ಷ ಜಿ.ಎನ್.ಪ್ರವೀಣ್, ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷ ಚಿದಂಬರ್, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಸುಬ್ರಹ್ಮಣ್ಯ ಮಾಸ್ತಿಕಟ್ಟೆ, ಗ್ರಾಪಂ ಸದಸ್ಯ ಮಹೇಂದ್ರ, ಮುಖಂಡರಾದ ಸದಾಶಿವ, ಲೋಕೇಶಪ್ಪ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net