ತೆಪ್ಪದಲ್ಲಿ ಇಬ್ಬರಿಂದ ಮೂವರಿಗೆ ಅವಕಾಶ | Ganapati Murthy

ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ
ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ
Published on

ಪ್ರಮುಖ ಮುಖ್ಯಾಂಶಗಳು

  • ಗಣಪತಿ ಮೂರ್ತಿಗಳ ವಿಸರ್ಜನೆಗೆ ಮುನ್ನೆಚ್ಚರಿಕಾ ಕ್ರಮ
  • ನದಿ, ಕೆರೆ, ಹಿನ್ನೀರು ಪ್ರದೇಶಗಳಲ್ಲಿ ಮಾರ್ಗಸೂಚಿ ಪಾಲನೆ ಕಡ್ಡಾಯ
  • ಆದೇಶ ಹೊರಡಿಸಿದ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ
ಶಿವಮೊಗ್ಗ: ಜಿಲ್ಲೆಯಲ್ಲಿ ಮುಂಬರುವ ಗಣೇಶ ಚತುರ್ಥಿ ಹಬ್ಬ(Ganesh Chaturthi festival)ದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಗಣಪತಿ ಮೂರ್ತಿಗಳ ವಿಸರ್ಜನೆ ವೇಳೆ ಸಂಭವಿಸಬಹುದಾದ ಅನಾಹುತಗಳನ್ನು ತಡೆಯಲು ಹಾಗೂ ಸಾರ್ವಜನಿಕ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೆಲವೊಂದು ಕಟ್ಟುನಿಟ್ಟಿನ ಆದೇಶವನ್ನು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ(DC Prabhulinga Kavalikatti) ಹೊರಡಿಸಿದ್ದಾರೆ.
ಸೆ.14ರಿಂದ ಗಣೇಶ ಹಬ್ಬ ಆರಂಭವಾಗುವ ಹಿನ್ನೆಲೆಯಲ್ಲಿ ಹೊಳೆ, ನದಿ, ಕೆರೆ ಹಾಗೂ ಹಿನ್ನೀರು ಪ್ರದೇಶಗಳಲ್ಲಿ ತೆಪ್ಪದ ಮೂಲಕ ಮೂರ್ತಿ ವಿಸರ್ಜನೆ ಮಾಡುವ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮ(Precautionary measure)ಗಳನ್ನು ಕೈಗೊಳ್ಳುವುದು ಕಡ್ಡಾಯ ಎಂದಿದ್ದಾರೆ. ಈ ಹಿಂದೆ ಶಿವಮೊಗ್ಗ ತಾಲೂಕಿನ ಹಾಡೋನಹಳ್ಳಿ ಗ್ರಾಮದಲ್ಲಿ ತೆಪ್ಪ ಮುಳುಗಿ 12 ಜನರು ಸಾವನ್ನಪ್ಪಿದ್ದ ದುರಂತ ಗಮನದಲ್ಲಿಟ್ಟುಕೊಂಡು ಅಂತಹ ಅನಾಹುತಗಳು ಮರುಕಳಿಸದಂತೆ ತಡೆಯಲು ಈ ಸುರಕ್ಷತಾ ಮಾರ್ಗಸೂಚಿಗಳ ಪಾಲನೆ ಕಡ್ಡಾಯಗೊಳಿಸಲಾಗಿದೆ ಎಂದಿದ್ದಾರೆ.
ತೆಪ್ಪದ ಮೂಲಕ ವಿಸರ್ಜನೆ ಮಾಡುವಾಗ ಇಬ್ಬರಿಂದ ಮೂವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ತೆಪ್ಪದಲ್ಲಿ ತೆರಳುವ ಪ್ರತಿಯೊಬ್ಬರೂ ಕಡ್ಡಾಯವಾಗಿ ಲೈಫ್ ಜ್ಯಾಕೆಟ್(Life jacket) ಧರಿಸಿರಬೇಕು. ನುರಿತ ಈಜುಗಾರರ ಸಮಕ್ಷಮದಲ್ಲೇ ಗಣಪತಿ ಮೂರ್ತಿ ವಿಸರ್ಜನೆ ಪ್ರಕ್ರಿಯೆ ನಡೆಸಬೇಕು. ಎಸ್‌ಪಿ ಶಿಫಾರಸ್ಸಿನ ಮೇರೆಗೆ ಜಿಲ್ಲಾದ್ಯಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಗಳು ಸಂಪೂರ್ಣವಾಗಿ ಮುಕ್ತಾಯಗೊಳ್ಳುವವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಸ್ಪಷ್ಟಪಡಿಸಿದ್ದಾರೆ.
ಡಿಜೆ ಸಿಸ್ಟಂ, ಬೈಕ್ rally ನಿಷೇಧ: ಗಣೇಶ ಹಬ್ಬದ ಆಚರಣೆ ಮತ್ತು ಮೆರವಣಿಗೆ ಸಂದರ್ಭದಲ್ಲಿ ಸೆ.14ರಿಂದ ಅಕ್ಟೋಬರ್ 13ರವರೆಗೆ 30 ದಿನ ಡಿಜೆ ಸಿಸ್ಟಂ, ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದುಗಳನ್ನು ಸಿಡಿಸುವುದು ಮತ್ತು ಬೈಕ್ rally ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. 14ರಂದು ಜಿಲ್ಲಾದ್ಯಂತ ಗಣೇಶ ಹಬ್ಬ ನಡೆಯಲಿದ್ದು, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆ ಆಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆಗಳಿವೆ. ಆದ್ದರಿಂದ ಆ 30 ದಿನ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net