

ಪ್ರಮುಖ ಮುಖ್ಯಾಂಶಗಳು
ವಿಐಎಸ್‌ಎಲ್ ಕಾರ್ಖಾನೆಗೆ ಕೇಂದ್ರ ಸರ್ಕಾರ ಬಂಡವಾಳ ತೊಡಗಿಸಿ ಅಭಿವೃದ್ಧಿಪಡಿಸುವ ಚಿಂತನೆ ನಡೆಸುತ್ತಿರುವುದು ಸಂತಸದ ವಿಚಾರ. ಎಂಪಿಎಂ ಕಾರ್ಖಾನೆಯನ್ನು ಖಾಸಗಿ ಕಂಪನಿಗೆ ನೀಡುವ ಮೂಲಕ ಪುನರಾರಂಭಕ್ಕೆ ಎಲ್ಲ ಪ್ರಯತ್ನಗಳು ನಡೆಯುತ್ತಿವೆ. ಸಂಸದರು ಕೇಂದ್ರ ಸರ್ಕಾರದ ಮನವೊಲಿಸಿ 50 ಸಾವಿರ ಎಕರೆ ಭೂಮಿಯಲ್ಲಿ ಅಕೇಶಿಯಾ ಅರಣ್ಯೀಕರಣಕ್ಕೆ ಅರಣ್ಯ ಇಲಾಖೆಯಿಂದ ಎನ್‌ಒಸಿ ಕೊಡಿಸಿದರೆ ಶೀಘ್ರವಾಗಿ ಕಾರ್ಖಾನೆ ಆರಂಭವಾಗುತ್ತದೆ ಎಂದರು.