ಹೂಗುಚ್ಛ ನೀಡಿ ಮಕ್ಕಳಿಗೆ ಸ್ವಾಗತ

ಸೊರಬದ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿದ್ಯಾರ್ಥಿಗಳನ್ನು ಶಿಕ್ಷಕರು ಮತ್ತು ಎಸ್‌ಡಿಎಂಸಿ ಸದಸ್ಯರು ಹೂಗುಚ್ಛ ನೀಡಿ ಬರಮಾಡಿಕೊಂಡರು.
ಸೊರಬದ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆ ವಿದ್ಯಾರ್ಥಿಗಳನ್ನು ಶಿಕ್ಷಕರು ಮತ್ತು ಎಸ್‌ಡಿಎಂಸಿ ಸದಸ್ಯರು ಹೂಗುಚ್ಛ ನೀಡಿ ಬರಮಾಡಿಕೊಂಡರು.
Published on
ಸೊರಬ: ತಾಲೂಕಿನ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶಿಕ್ಷಕರು ಹೂಗುಚ್ಛ ನೀಡಿ ಸ್ವಾಗತಿಸಿದರು.
ಶೈಕ್ಷಣಿಕ ವರ್ಷ ಪ್ರಾರಂಭವಾದ ಹಿನ್ನೆಲೆಯಲ್ಲಿ SCHOOL ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಶಿಕ್ಷಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಸಿಬ್ಬಂದಿ ವಿದ್ಯಾರ್ಥಿಗಳನ್ನು ಬರಮಾಡಿಕೊಂಡರು. ಪಟ್ಟಣದ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ಮಕ್ಕಳನ್ನು ಸ್ವಾಗತಿಸಿ ನಂತರ ಪಾಲಕರ ಸಭೆ ನಡೆಸಲಾಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಪ್ಪ ಕೊಡಕಣಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದು, ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗೇ ಸೇರಿಸಬೇಕು. ಉಚಿತ ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಪೋಷಕಾಂಶಯುಕ್ತ ಬಿಸಿಯೂಟ ನೀಡುವ ಮೂಲಕ ವಿದ್ಯಾರ್ಥಿಗಳ ಆರೋಗ್ಯ ಕಾಳಜಿ ಹಾಗೂ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದರು.
ಮುಖ್ಯಶಿಕ್ಷಕ ಫಕೀರಪ್ಪ ಮಾತನಾಡಿ, ಪಾಲಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು. ಶಾಲೆಯಲ್ಲಿ ಪಠ್ಯೇತರ ಚಟುವಟಿಕೆಗಳಿಗೂ ಒತ್ತು ನೀಡಲಾಗುತ್ತದೆ ಎಂದು ತಿಳಿಸಿದರು. ಸತೀಶ್, ಹಾಲಪ್ಪ, ಗಿರಿಜಮ್ಮ, ನಾಗರತ್ನಾ, ನಾಗಜೋತಿ, ವಾಣಿ, ಮಾಲತೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net