ಖಾಸಗಿ ಫೋಟೋ ವೈರಲ್ ಮಾಡುವುದಾಗಿ ಮಹಿಳೆಗೆ ಬೆದರಿಕೆ

ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆ
ಶಿವಮೊಗ್ಗ ಸಿಇಎನ್ ಕ್ರೈಂ ಪೊಲೀಸ್ ಠಾಣೆ
Published on

ಪ್ರಮುಖ ಮುಖ್ಯಾಂಶಗಳು

  • ಭದ್ರಾವತಿ ಮಹಿಳೆಗೆ 10 ಲಕ್ಷ ರೂ. ಬೇಡಿಕೆ ಇಟ್ಟ ಅಪರಿಚಿತ
  • ಹಣ ವರ್ಗಾಯಿಸಲು ಹಲವಾರು ಬ್ಯಾಂಕ್ ಖಾತೆ ವಿವರ ಕಳುಹಿಸಿದ್ದ
ಶಿವಮೊಗ್ಗ: ಮಹಿಳೆಯೊಬ್ಬರ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ 10 ಲಕ್ಷ ರೂ. ಬೇಡಿಕೆ ಇಟ್ಟ ಬಗ್ಗೆ ದೂರು ದಾಖಲಾಗಿದೆ. 
ಅ.31ರಂದು ಅಪರಿಚಿತ ವ್ಯಕ್ತಿಯೊಬ್ಬ ಭದ್ರಾವತಿಯ ಮಹಿಳೆ ಫೋನ್ ಸಂಖ್ಯೆಗೆ ಖಾಸಗಿ ವಿಡಿಯೋಗಳು ಮತ್ತು ಚಿತ್ರಗಳನ್ನು ಕಳುಹಿಸಿ 10 ಲಕ್ಷ ರೂ. ನೀಡದಿದ್ದರೆ ಈ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ನಿಮ್ಮ ಕುಟುಂಬ ಸದಸ್ಯರಿಗೆ ಹಂಚುತ್ತೇನೆ ಎಂದು ಬೆದರಿಕೆ ಹಾಕಿದ್ದ. 
ಈ ಘಟನೆಯಿಂದ ಭಯಗೊಂಡ ಮಹಿಳೆ ಆ ದಿನವೇ ಸಂದೇಶಗಳನ್ನು ಅಳಿಸಿದರೂ ಆರೋಪಿ ನ.3ರಂದು ಮತ್ತೆ ಸಂಪರ್ಕಿಸಿ ಹಣ ವರ್ಗಾಯಿಸಲು ಹಲವಾರು ಬ್ಯಾಂಕ್ ಖಾತೆ ವಿವರಗಳನ್ನು ಕಳುಹಿಸಿದ್ದಾನೆ. ಹಣ ನೀಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಮತ್ತೆ ಬೆದರಿಕೆ ಹಾಕಿದಾನೆ. ಘಟನೆಯಿಂದ ಆತಂಕಕ್ಕೆ ಒಳಗಾದ ಮಹಿಳೆ ಪೊಲೀಸರಿಗೆ ದೂರು ನೀಡಿದ್ದು, ಈ ಬಗ್ಗೆ ಸಿಇಎನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net