ಕಾಲುಬಾಯಿ ರೋಗ ನಿರ್ಮೂಲನೆಗೆ ಶ್ರಮಿಸಿ

ಸೊರಬ ತಾಲೂಕಿನ ಗಿಣಿವಾಲ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಚಿವ ಮಧು ಬಂಗಾರಪ್ಪ  ಚಾಲನೆ ನೀಡಿದರು. ಆರ್.ಪ್ರಸನ್ನಕುಮಾರ್, ಕೆ.ಪಿ.ರುದ್ರಗೌಡ, ಜಿ.ಡಿ.ಮಂಜುನಾಥ್, ರುದ್ರಗೌಡ ಪಾಟೀಲ್ ಇತರರಿದ್ದರು.
ಸೊರಬ ತಾಲೂಕಿನ ಗಿಣಿವಾಲ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ಆರ್.ಪ್ರಸನ್ನಕುಮಾರ್, ಕೆ.ಪಿ.ರುದ್ರಗೌಡ, ಜಿ.ಡಿ.ಮಂಜುನಾಥ್, ರುದ್ರಗೌಡ ಪಾಟೀಲ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವೈರಾಣುವಿನಿಂದ ಹರಡುವ ರೋಗ
  • ಆರ್ಥಿಕ ಸಂಕಷ್ಟ ತಂದೊಡ್ಡುವ ಕಾಯಿಲೆ
  • ಜಾನುವಾರುಗಳ ರಕ್ಷಣೆಗೆ ಕ್ರಮ ಕೈಗೊಳ್ಳಿ
ಸೊರಬ: ಜಾನುವಾರುಗಳಿಗೆ ತಗುಲುವ ಮಾರಕ ಕಾಲುಬಾಯಿ ರೋಗವನ್ನು ಶಾಶ್ವತ ನಿರ್ಮೂಲನೆಗಾಗಿ ಸಂಕಲ್ಪ ಮಾಡೋಣ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ತಾಲೂಕಿನ ಗಿಣಿವಾಲ ಗ್ರಾಮದಲ್ಲಿ ಸೋಮವಾರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಹಮ್ಮಿಕೊಂಡಿದ್ದ ಕಾಲುಬಾಯಿ ರೋಗಕ್ಕೆ ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆಯಡಿ ತಾಲೂಕಿನ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. ಕಾಲುಬಾಯಿ ರೋಗ ತಡೆಗಟ್ಟಲು ಎಲ್ಲ ರೈತರು ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕು. ಈ ಮೂಲಕ ಆರ್ಥಿಕ ನಷ್ಟ ಆಗುವುದನ್ನು ತಪ್ಪಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಲಸಿಕಾದಾರರು ನಿಮ್ಮ ಮನೆ ಬಾಗಿಲಿಗೆ ಬರುತ್ತಾರೆ. ರೈತರು ನಿರ್ಲಕ್ಷೃ ತೋರದೆ ಸಹಕರಿಸಬೇಕು. ರೋಗ ಬಾರದಂತೆ ಜಾನುವಾರುಗಳನ್ನು ರಕ್ಷಿಸಿಕೊಳ್ಳಬೇಕು. ಕಾಲುಬಾಯಿ ರೋಗ ವೈರಾಣುವಿನಿಂದ ಹರಡುವ ಸಾಂಕ್ರಾಮಿಕ ರೋಗ. ರೈತರಿಗೆ ಆರ್ಥಿಕ ಸಂಕಷ್ಟಗಳನ್ನು ತಂದೊಡ್ಡುವ ಕಾಯಿಲೆ. ಹೀಗಾಗಿ ಕಾಲುಬಾಯಿ ರೋಗವನ್ನು ನಿಯಂತ್ರಿಸಲು ಪ್ರತಿ 6 ತಿಂಗಳಿಗೊಮ್ಮೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಪಿ.ರುದ್ರಗೌಡ, ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಸಂಯೋಜಕ ಜಿ.ಡಿ.ಮಂಜುನಾಥ್, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ರಮೇಶ್ ಶಂಕರಘಟ್ಟ, ತಾಪಂ ಮಾಜಿ ಅಧ್ಯಕ್ಷ ಗಣಪತಿ ಹುಲ್ತಿಕೊಪ್ಪ, ಹಾಪ್‌ಕಾಮ್ಸ್ ಮಾಜಿ ನಿರ್ದೇಶಕ ಕೆ.ವಿ.ಗೌಡ್ರು, ರುದ್ರಗೌಡ ಪಾಟೀಲ್, ಬಗರ್‌ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ.ಶೇಖರ್, ಪಶುವೈದ್ಯಾಧಿಕಾರಿ ಡಾ. ಎನ್.ಆರ್.ಪ್ರದೀಪ್‌ಕುಮಾರ್, ಡಾ. ಹನುಮಂತ ರಾವ್, ಡಾ. ಎಚ್.ಕೆ.ಮನೋಜ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net