ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಹಕರಿಸಿ

ಮಕ್ಕಳ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
Holehonnur: H.N.S. Rao, an alumnus of the school, stated that the cooperation of the community is essential for the development of government schools.
ಹೊಳೆಹೊನ್ನೂರಿನ ಸರ್ಕಾರಿ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಎಚ್​ಎನ್​ಎಸ್​ ರಾವ್​, ಸಿ.ಮಂಜುನಾಥ, ನಿರ್ಮಲಾ ಗಣೇಶ್​, ಎ.ಕೆ.ಮಂಜಪ್ಪ ಇತರರಿದ್ದರು.Contribute to the development of government schools.
Published on: 

ಹೊಳೆಹೊನ್ನೂರು: ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಮುದಾಯದ ಸಹಕಾರ ಅಗತ್ಯ ಎಂದು ಶಾಲೆಯ ಹಿರಿಯ ವಿದ್ಯಾರ್ಥಿ ಎಚ್​ಎನ್​ಎಸ್​ ರಾವ್​ ಹೇಳಿದರು. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿ, ಸರ್ಕಾರಿ ಶಾಲೆ ಮಕ್ಕಳಿಗೆ ಹೆಚ್ಚು ಪ್ರೋತ್ಸಾಹ ನೀಡಿದಲ್ಲಿ ಉತ್ತಮ ಪ್ರತಿಭೆಗಳು ಹೊರಹೊಮ್ಮಲು ಸಹಕಾರಿ ಆಗುತ್ತದೆ ಎಂದು ತಿಳಿಸಿದರು. ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕರಿಸಿದಲ್ಲಿ ಇತರರು ಸಾಧನೆ ಮಾಡಲು ಪ್ರೇರಣೆ ದೊರೆಯುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಹೆಚ್ಚು ಆಸಕ್ತಿವಹಿಸಿ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು. ಸಿದ್ದೇಶ್ವರ ಪದವಿಪೂರ್ವ ಕಾಲೇಜಿನ ಉಪ ಪ್ರಾಚಾರ್ಯ ಸಿ.ಮಂಜುನಾಥ, ಗ್ರಾಪಂ ಮಾಜಿ ಸದಸ್ಯೆ ನಿರ್ಮಲಾ ಗಣೇಶ್​, ಸಿಆರ್​ಪಿ ಎ.ಕೆ.ಮಂಜಪ್ಪ, ಎಸ್​ಡಿಎಂಸಿ ಉಪಾಧ್ಯ ರಾಜು, ಸದಸ್ಯರಾದ ಡಿ.ಕೆ.ಅರುಣ್​, ಶ್ವೇತಾ ಚಂದ್ರಶೇಖರ್​ ಇತರರಿದ್ದರು.