ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ ಪ್ರಶಸ್ತಿಗೆ ಭಾಜನರಾದ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು

Shivananda Tagaduru
Published on

ಬೆಂಗಳೂರು: ಸುತ್ತೂರು ಮಠದ ಜಗದ್ಗುರು ಡಾ.ಶಿವರಾತ್ರಿ ರಾಜೇಂದ್ರ ಶ್ರೀಗಳ 107ನೇ ಜಯಂತಿ ಅಂಗವಾಗಿ ಮೈಸೂರು ಶರಣ ಮಂಡಳಿ ಪ್ರತಿ ವರ್ಷ ನೀಡುವ ರಾಜೇಂದ್ರ ಶ್ರೀಗಳ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಅಧ್ಯಕ್ಷರಾದ ಶಿವಾನಂದ ತಗಡೂರು ಭಾಜನರಾಗಿದ್ದಾರೆ.

ದಿನಾಂಕ 17.9.2022 ರಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶರಣ ಮಂಡಳಿ ಅಧ್ಯಕ್ಷ ಮೂಗೂರು ನಂಜುಂಡಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net