ಗೀತಾ ಸೋಲಿನ ಬಳಿಕ ಶಿವಣ್ಣ ಪ್ರತಿಕ್ರಿಯೆ ಏನು ಗೊತ್ತಾ?

Shivarajkumar
Published on

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕಿಯಾಗಿ ಗುರುತಿಸಿಕೊಂಡಿರುವ ಗೀತಾ ಶಿವರಾಜ್​ಕುಮಾರ್​ ಕಾಂಗ್ರೆಸ್​​ ಪಕ್ಷದಿಂದ ಲೋಕಸಭಾ ಚುನಾವಣಾಯಲ್ಲಿ ಸ್ಪರ್ಧೆ ಮಾಡಿ ಸೋಲನ್ನು ಅನುಭವಿಸಿದ್ದಾರೆ.

ಕಾಂಗ್ರೆಸ್​ ಅಭ್ಯರ್ಥಿಯಾಗಿ ಶಿವಮೊಗ್ಗದಲ್ಲಿ ಗೀತಾ ಅವರು ಸ್ಪರ್ಧಿಸಿದ್ದರು. ಅವರ ಪರವಾಗಿ ನಟ ಶಿವರಾಜ್​ಕುಮಾರ್​ ಅವರು ಸಿಕ್ಕಾಪಟ್ಟೆ ಪ್ರಚಾರ ಮಾಡಿದ್ದರು. ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರು ಜಯ ಸಾಧಿಸಿದ್ದಾರೆ. ಚುನಾವಣಾ ಫಲಿತಾಂಶದ ಬಗ್ಗೆ ಶಿವರಾಜ್​ಕುಮಾರ್ ಅವರು ಸೋಶಿಯಲ್​ ಮೀಡಿಯಾ ಮೂಲಕ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

‘ಧನ್ಯವಾದಗಳು… ಫಲಿತಾಂಶಗಳು ನಮ್ಮ ಕಡೆಯಾಗದಿದ್ದರೂ ನಿಮ್ಮೂಂದಿಗಿನ ಈ ಪ್ರಯಾಣ ಮತ್ತು ನಮ್ಮ ಜನರ ಅಚಲವಾದ ಬೆಂಬಲಕ್ಕಾಗಿ ನಾವು ಸದಾ ಕೃತಜ್ಞರಾಗಿರುತ್ತೇವೆ. ಮತದಾರನ ನಿರ್ಣಯಕ್ಕೆ ತಲೆ ಬಾಗುತ್ತಾ, ನಾವು ಭವಿಷ್ಯದ ಬದಲಾವಣೆಗಾಗಿ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ. ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಹಾಗೂ ವಿಶ್ವಾಸವನ್ನಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು’ ಎಂದು ಶಿವರಾಜ್​ಕುಮಾರ್​ ಅವರು ಪೋಸ್ಟ್​ ಮಾಡಿದ್ದಾರೆ.

ಬಿ.ವೈ. ರಾಘವೇಂದ್ರ ಅವರು 7,78,721 ಮತಗಳನ್ನು ಪಡೆದು ಜಯ ಸಾಧಿಸಿದರು. 2,43,715 ಮತಗಳ ಅಂತರದಲ್ಲಿ ಅವರು ವಿನ್​ ಆದರು. ಗೀತಾ ಶಿವರಾಜ್​ಕುಮಾರ್​ ಅವರು 5,35,006 ಮತಗಳನ್ನು ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net