ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ

karanta
2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುವ ತಲ್ಲೂರು ಗ್ರಾಪಂ ಅನ್ನು ಕಾರಂತ ವಿಶೇಷ ಪುರಸ್ಕಾರ ನೀಡಿ ಅಭಿನಂದಿಸಲಾಯಿತು
Published on

ಕುಂದಾಪುರ: 2023-24ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುವ ತಲ್ಲೂರು ಗ್ರಾಪಂ ಅನ್ನು ಕೋಟತಟ್ಟು ಗ್ರಾಪಂ ನೇತೃತ್ವದಲ್ಲಿ ಕೋಟ ಕಾರಂತ ಥೀಂ ಪಾರ್ಕ್‌ನಲ್ಲಿ ನಡೆದ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕಾರಂತ ವಿಶೇಷ ಪುರಸ್ಕಾರ ನೀಡಿ ಅಭಿನಂದಿಸಲಾಯಿತು.

ತಲ್ಲೂರು ಗ್ರಾಪಂ ಅಧ್ಯಕ್ಷ ಗಿರೀಶ್ ಮಾತನಾಡಿ, ತಲ್ಲೂರು ಗ್ರಾಪಂ ಜನಪರಾಗಿ ಕಾರ್ಯನಿರ್ವಹಿಸುತ್ತಾ ಬಂದಿದೆ. ಆಡಳಿತ ನಿರ್ವಹಣೆಯಲ್ಲೂ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದೆ. ಪಂಚಾಯಿತಿಯ ಕಾರ್ಯವೈಖರಿ ಗಮನಿಸಿದ ಸರ್ಕಾರ ಪ್ರತಿಷ್ಟಿತ ಗಾಂಧಿ ಗ್ರಾಮ ಪುರಸ್ಕಾರ ಆಯ್ಕೆ ಮಾಡಿದೆ. ಇದರಿಂದ ಇನ್ನೂ ಹೆಚ್ಚು ಕೆಲಸ ಮಾಡಲು ಪ್ರೇರಣೆಯಾಗಿದೆ ಎಂದರು.

ಮೇಘಾಲಯದ ರಾಜ್ಯಪಾಲ ಸಿ.ಎಚ್.ವಿಜಯಶಂಕರ್ ಪುರಸ್ಕಾರ ಪ್ರದಾನ ಮಾಡಿದರು. ಸರ್ಕಾರ ಗ್ರಾಮ ಪಂಚಾಯಿತಿಯ ಉತ್ತಮ ಆಡಳಿತ ನಿರ್ವಹಣೆಯನ್ನು ಪರಿಶೀಲಿಸಿ ಪ್ರತೀ ವರ್ಷ ಉತ್ತಮ ಕಾರ್ಯನಿರ್ವಹಣೆ ತೋರಿದ ಪಂಚಾಯಿತಿಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡುತ್ತಾ ಬಂದಿವೆ.

ತಲ್ಲೂರು ಗ್ರಾಪಂ ಅಧ್ಯಕ್ಷ ಗಿರೀಶ್ ಎಸ್.ನಾಯ್ಕ, ಉಪಾಧ್ಯಕ್ಷೆ ಚಂದ್ರಮತಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರತ್ನ ಜಿ, ಕಾರ್ಯದರ್ಶಿ, ಗ್ರಾಪಂ ಸದಸ್ಯರು, ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net