ಅ.10 ರಿಂದ 12ರವರೆಗೆ ಶಿವರಾಮ ಕಾರಂತ ಸಾಹಿತ್ಯೋತ್ಸವ

udp-karantha
Published on

ಉಡುಪಿ: ಡಾ. ಶಿವರಾಮ ಕಾರಂತ ಟ್ರಸ್ಟ್​ ಹಾಗೂ ಕನ್ನಡ ಮತ್ತು ಸಂಸತಿ ಇಲಾಖೆಯ ವತಿಯಿಂದ ಕಾರಂತ ಜನ್ಮದಿನೋತ್ಸವ-, ಸಾಹಿತ್ಯೋತ್ಸವ ಹಾಗೂ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಸಮಾರಂಭ- ಅ.10 ರಿಂದ 12ರವರೆಗೆ ನಡೆಯಲಿದೆ ಎಂದು ಡಾ. ಶಿವರಾಮ ಕಾರಂತ ಟ್ರಸ್ಟ್​ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅ.10ರಂದು ಬೆಳಗ್ಗೆ 10ಕ್ಕೆ ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ಯುವ ಬರಹಗಾರರ ಸಮಾವೇಶ ನಡೆಯಲಿದೆ. ಅ.11ರಂದು ಸಾಯಂಕಾಲ 4ಗಂಟೆಗೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಕಲಾ ಮಂಟಪದಲ್ಲಿ ಡಾ. ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಯಶ್​ ಪಾಲ್​ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ವಿದ್ಯಾಂಸ ಡಾ. ಬಿ.ಎ. ವಿವೇಕ ರೈ ಅವರಿಗೆ ಟ್ರಸ್ಟಿನ ಮೊದಲ ಡಾ. ಶಿವರಾಮ ಕಾರಂತ ಪ್ರಶಸ್ತಿಯನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರದಾನ ಮಾಡಲಿದ್ದಾರೆ. ಹಿರಿಯ ಜಾನಪದ ವಿದ್ವಾಂಸ ಎಸ್​.ಎ ಕೃಷ್ಣಯ್ಯ, ಹಿರಿಯ ಸಂಶೋಧಕಿ ಡಾ. ರೇಖಾ ಬನ್ನಾಡಿ, ಯಕ್ಷಗಾನ ಕಲಾವಿದ ಶೇಕ್​ ಮಹಮ್ಮದ್​ ಗೌಸ್​ ಅವರಿಗೆ ವಿಶೇಷ ಪುರಸ್ಕಾರ ನೀಡಲಾಗುವುದು. ಕನ್ನಡ ಹಿರಿಯ ವಿಮರ್ಶಕ ಡಾ.ಎಸ್​.ಆರ್​ ವಿಜಯಶಂಕರ್​ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕಾರ್ಯಕ್ರಮದ ಬಳಿಕ ಡಾ. ಕಾರಂತರ ಕಾದಂಬರಿ ಆಧಾರಿತ ಮೈಮನಗಳ ಸುಳಿಯಲ್ಲಿ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ತಿಳಿಸಿದರು.

ಅ. 12ರಂದು ಸಂಜೆ 4 ಗಂಟೆಗೆ ಕಾರ್ಕಳದ ರಂಗಾಯಣದಲ್ಲಿ ಕಾರಂತರ ಸಾಹಿತ್ಯ ಉಪನ್ಯಾಸ ಮತ್ತು ಕಾರಂತ ರಂಗ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್​ನ ಸದಸ್ಯ ಕಾರ್ಯದರ್ಶಿ ಪೂರ್ಣಿಮಾ, ಸದಸ್ಯರಾದ ಜಿ.ಎಂ. ಶರೀಫ್​ ಹೂಡೆ, ಸತೀಶ್​ ಕೊಡವೂರು, ಯಕ್ಷ ರಂಗಾಯಣದ ನಿರ್ದೇಶಕ ವೆಂಕಟರಾಮಣ ಐತಾಳ್​ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net