ಶಿವರಾತ್ರಿ: ಮೈಸೂರು ಅರಮನೆ ಶಿವಲಿಂಗಕ್ಕೆ 11 ಕೆ.ಜಿ. ಕೊಳಗ ಅಳವಡಿಕೆ

11 kg. Kolaga installed at Mysore Palace Shivalinga
Published on

ಮೈಸೂರು: ಅರಮನೆ ಆವರಣದಲ್ಲಿರುವ ತ್ರಿಣೇಶ್ವರ ದೇವಾಲಯದಲ್ಲಿ ಶಿವರಾತ್ರಿ ಪ್ರಯುಕ್ತ ಬುಧವಾರ ವಿಶೇಷ ಪೂಜಾ ಕೈಂಕರ್ಯ ನಡೆ ಯಿತು. ತ್ರಿಣೇಶ್ವರನಿಗೆ ರುದ್ರಾಭಿಷೇಕ, ಕುಂಕುಮಾರ್ಚನೆ ಸೇರಿದಂತೆ ವಿಶೇಷ ಪೂಜೆಗಳು ನೇರವೇರಿತು. ಪೂಜೆಯ ನಂತರ ಶಿವಲಿಂಗಕ್ಕೆ ಚಿನ್ನದ ಕೊಳಗ ಧಾರಣೆ ಮಾಡಲಾಯಿತು. ಭಕ್ತಾದಿಗಳು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.

ವರ್ಷಕ್ಕೊಮ್ಮೆ ಶಿವರಾತ್ರಿ ಸಂದರ್ಭ ಚಿನ್ನದ ಕೊಳಗವನ್ನು ಧಾರಣೆ ಮಾಡಲಾಗುತ್ತದೆ. ಈ ಕೊಳಗವನ್ನು 1953ರಲ್ಲಿ ಹರಕೆ ರೂಪದಲ್ಲಿ ಮೈಸೂರು ಮಹಾರಾಜ ಜಯಚಾಮರಾಜೇಂದ್ರ ಒಡೆಯರ್ ನೀಡಿದ್ದರು. 11 ಕೆ.ಜಿ. ತೂಕದ ಚಿನ್ನದ ಕೊಳಗ ಧರಿಸಿದ ಶಿವಲಿಂಗವನ್ನು ಬುಧವಾರ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ವೀಕ್ಷಿಸಿ ಪುನೀತರಾದರು. ದೇವಸ್ಥಾನಕ್ಕೆ ಮೈಸೂರು ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ಹಾಗೂ ಮಕ್ಕಳ ಜತೆ ಆಗಮಿಸಿ ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net